Crease wise (28th Jan)
KLE1099 Add

ಗೋಕಾಕ್ ಫಾಲ್ಸ್  ನಡುವಿನ  ಸೇತುವೆ ಕಾಮಗಾರಿ:  ಜುಲೈನೊಳಗೆ ಪೂರ್ಣಗೊಳಿಸಲು ಡಿಸಿಎಂ ಸೂಚನೆ 

ಕಾಮಗಾರಿ ಪರಿಶೀಲನೆ ನಡೆಸಿದ ಕಾರಜೋಳ

Anand Ads 3 (3)

ಪ್ರಗತಿವಾಹಿನಿ ಸುದ್ದಿ; ಗೋಕಾಕ್ : ಗೋಕಾಕ್ ಫಾಲ್ಸ್ ನಡುವೆ ನಿರ್ಮಾಣ ಹಂತದಲ್ಲಿರುವ 15.54 ಕೋಟಿ ರೂ ವೆಚ್ಚ ದ ಸೇತುವೆ ಕಾಮಗಾರಿಯನ್ನು ಜುಲೈನೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದ ಅವರು, ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಿ ವಾಹನಗಳ ಸಂಚಾರಕ್ಕೆ, ಪ್ರವಾಸಿಗರಿಗೆ  ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.