GIT add 2024-1
Laxmi Tai add
Beereshwara 33

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಹಲವಾರು ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ

Anvekar 3
Cancer Hospital 2

ಧನಶ್ರೀ ಯೋಜನೆ: ಎಚ್.ಐ.ವಿ ಪೀಡಿತ ಮಹಿಳೆಯರಿಂದ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮದಿಂದ ಧನಶ್ರೀ ಯೋಜನೆಯಡಿ ಎಚ್.ಐ.ವಿ ಪೀಡಿತ/ ಸೋಂಕಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ಆರ್ಥಿಕವಾಗಿ ಸಮೃದ್ಧಿ ಹೊಂದಲು ರೂ.೨೫,೦೦೦ ಗಳ ನಿಗಮದಿಂದ ನೇರ ಬಡ್ಡಿ ರಹಿತ ಸಾಲ ಹಾಗೂ ರೂ.೨೫,೦೦೦ ಗಳ ಸಹಾಯಧನ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿಗಳನ್ನು ಪ್ರತಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಚೇರಿಯಿಂದ ಪಡೆದು ಅ.೨೦ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಾ.

ಸಾಲ ಪಡೆಯಲು ಅರ್ಹತೆಗಳು:
ಅರ್ಜಿದಾರಳು ರಾಷ್ಟ್ರೀಕೃತ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಚಾಲ್ತಿಯಲ್ಲಿರಬೇಕು. ಕರ್ನಾಟಕ ರಾಜ್ಯ ಖಾಯಂ ನಿವಾಸಿಗಳಾಗಿರಬೇಕು. ಅರ್ಜಿದಾರಳು ೧೮ ರಿಂದ ೬೦ ವರ್ಷದೊಳಗಿರಬೇಕು. ಅರ್ಜಿದಾರಳು ಯಾವುದೇ ಆರ್ಥಿಕ ಸಂಸ್ಥೆ/ಬ್ಯಾಂಕುಗಳಲ್ಲಿ ಸಾಲಗಾರರಾಗಿರಬಾರದು. ಗಂಡ, ಹೆಂಡತಿ, ಎರಡು ಮಕ್ಕಳು ಹೊಂದಿರುವ ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ ಯೋಜನೆಯ ಸೌಲಬ್ಯ ಹೊಂದಲು ಅರ್ಹರು.
ಅರ್ಜಿದಾರಳ ಕುಟುಂಬದಲ್ಲಿ (೫.೧) ಮಹಿಳೆ ಹೆಚ್.ಐ.ಚಿ ಸೋಂಕಿತಳಾಗಿದ್ದರೆ, (೫.೨) ಮಹಿಲೆ ಹೆಚ್.ಐ.ವಿ ಯಿಂದ ಬಾಧಿತಳಾಗಿದ್ದರೆ (ಹೆಂಡತಿ ಅಥವಾ ೧೮ ವರ್ಷ ಮೀರಿದ ಅವಿವಾಹಿತೆ ಮಗಳು) ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿರುತ್ತದೆ. ಈ ಕುರಿತಾಗಿ ಜಿಲ್ಲೆಯ ಹತ್ತಿರದ ಆರೋಗ್ಯ ಕೇಂದ್ರದಲ್ಲಿನ ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ವೈದ್ಯಕೀಯ ವರದಯನ್ನು ಪಡೆಯಬೇಕು.

ಸಲ್ಲಿಸಬೇಕಾದ ದಾಖಲಾತಿಗಳು:
ಸಾಲ ಪಡೆಯಲು ನಿಗಮಕ್ಕೆ ಸಲ್ಲಿಸಬೇಕಾದ ಸಾಲ ಮತ್ತು ಸಹಾಯಧನದ ಅರ್ಜಿ, ಅರ್ಜಿದಾರಳ ೪ ಭಾವಚಿತ್ರಗಳು,
ವಿಳಾಸದ ದೃಢೀಕರಣ ದಾಖಲೆಗಳು (ಮತದಾರರ ಗುರುತಿನ ಚೀಟಿ/ಆಧಾರ್‌ಕಾರ್ಡ್/ಪಡಿತರಚೀಟಿ/ಯಾವುದಾದರೊಂದು
ದಾಖಲೆ, ಸಲ್ಲಿಸುವುದು. ಅರ್ಜಿದಾರಳು ಮತ್ತು ನಿಗಮದೊಂದಿಗೆ ಸಾಲದಕುರಿತಾಗಿ ಮಾಡಿಕೊಳ್ಳುವ ಒಪ್ಪಂದದ ಪತ್ರ (ರೂ.೨೦/- ಛಾಪಾಕಾಗದದಲ್ಲಿ), ರಾಷ್ಟ್ರೀಕೃತ ಬ್ಯಾಂಕಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು, ಐ.ಎಫ್.ಎಸ್.ಸಿ. ಕೋಡ್‌ನದಾಖಲೆ. ಕುಟುಂಬದ ಬಿ.ಪಿ.ಎಲ್ ಕಾರ್ಡ್‌ನ ನಕಲು ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ, ಸಾಲ ಪಡೆಯಲು ಉದ್ದೇಶಿಸಿದ ಆದಾಯೋತ್ಪನ್ನ ಚಟುವಟಿಕೆಯ ಯೋಜನಾ ವರದಿ, ಬೇರೆಯಾವುದೇ ಆರ್ಥಿಕ ಸಂಸ್ಥೆ ಅಥವಾ ಬ್ಯಾಂಕುಗಳಿಂದ ಸಾಲ ಪಡೆದಿಲ್ಲ ಎಂಬ ಬಗ್ಗೆ ದೃಢೀಕರಣ ಪತ್ರ., ಐ.ಸಿ.ಟಿ.ಸಿ./ ಪಿ.ಪಿ.ಟಿ.ಸಿ.ಟಿ. ಕೇಂದ್ರಗಳಲ್ಲಿ ಪಡೆದ ಹೆಚ್.ಐ.ವಿ. ಸೋಂಕು ಇರುವ ಸಂಬಂಧ ವೈದ್ಯಕೀಯ ವರದಿಯ ನಕಲು ಪ್ರತಿ ಹಾಗೂ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು ಎಂದು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯುಲ್ಲಿ ತಿಳಿಸಿದ್ದಾರೆ.

ಉದ್ಯೊಗಿನಿ ಯೋಜನೆ: ಮಹಿಳೆಯರಿಂದ ಅರ್ಜಿ ಆಹ್ವಾನ

ಮಹಿಳಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೊಗಿನಿ ಯೋಜನೆಯಡಿ ೧೮ ರಿಂದ ೫೫ ವಯೋಮಿತಿಯ ಇತರೆ ವರ್ಗದವರಿಗೆ ರೂ.೧.೫೦ ಲಕ್ಷ ಹಾಗೂ ಎಸ್.ಸಿ/ ಎಸ್.ಟಿ ವರ್ಗದವರ ರೂ.೨.೦೦ ಲಕ್ಷಕ್ಕಿಂತ ಕುಡುಂಬ ವಾರ್ಷಿಕ ಆದಾಯ ಮೀರದ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಘಟಕ ವೆಚ್ಚ ಕನಿಷ್ಠ ರೂ. ೧.೦೦ ಲಕ್ಷ ಗರಿಷ್ಠ ರೂ. ೩.೦೦ ಲಕ್ಷ ಇರುತ್ತದೆ. ಇತರೆ ವರ್ಗದವರಿಗೆ ಘಟಕ ವೆಚ್ಚದ ಪ್ರತಿಶತ ೩೦ ರಷ್ಟು, ಗರಿಷ್ಟ ರೂ.೯೦,೦೦೦ ಹಾಗೂ ಎಸ್.ಸಿ./ಎಸ್.ಟಿ ವರ್ಗದವರಿಗೆ ಪ್ರತಿಶತ ೫೦ ರಷ್ಟು ಗರಿಷ್ಟ ರೂ.೧,೫೦,೦೦೦
ನಿಗಮದಿಂದ ಸಹಾಯಧನ ಮತ್ತು ಬ್ಯಾಂಕ್ ಮೂಲಕ ಸಾಲ ಒದಗಿಸಲಾಗುವುದು.
ಆಸಕ್ತ ಮಹಿಳೆಯರು ತಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಅರ್ಜಿಗಳನ್ನು ಪಡೆದು ಅ.೨೦ರ ಒಳಗೆ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಾ.

ಸಾಲ ಪಡೆಯಲು ಅರ್ಹತೆಗಳು:
ಅರ್ಜಿದಾರಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ಅರ್ಜಿದಾರಳು ೧೮ ರಿಂದ ೫೫ ವರ್ಷದೊಳಗಿರಬೇಕು. ಅರ್ಜಿದಾರಳು ರಾಷ್ಟ್ರೀಕೃತ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಚಾಲ್ತಿಯಲ್ಲಿರಬೇಕು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು ಹಾಗೂ ಯೋಜನಾ ವರದಿ ಸಲ್ಲಿಸಬೇಕು.

ಸಲ್ಲಿಸಬೇಕಾದ ದಾಖಲಾತಿಗಳು:
ಜಾತಿ ಪ್ರಮಾಣ ಪತ್ರ ದೃಡಿಕರಿಸಿದ (ಸಂಬಂಧಿಸಿದವರಿಗೆ ಮಾತ್ರ), ಕುಟುಂಬ ವಾರ್ಷಿಕ ಆದಾಯ ಪ್ರಮಾಣ ಪತ್ರ
ವಿಳಾಸದ ದೃಢೀಕರಣ ದಾಖಲೆಗಳು (ಮತದಾರರ ಗುರುತಿನ ಚೀಟಿ /ಆಧಾರ್‌ಕಾರ್ಡ್/ಪಡಿತರಚೀಟಿ/ಯಾವುದಾದರೊಂದು ದಾಖಲೆ ಸಲ್ಲಿಸುವುದು.ಯೋಜನಾ ವರದಿ (ಅರ್ಜಿಯಲ್ಲಿ ನೀಡಿರುವಂತೆ ತುಂಬಿ ಸಲ್ಲಿಸತಕ್ಕದ್ದು), ತರಬೇತಿ ಅಥವಾ ಅನುಭವ ಪತ್ರ. ೩ ಭಾವಚಿತ್ರ ದ್ವಿ ಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿ. ಸ್ತ್ರೀ ಶಕ್ತಿ ಸಂಘದ ನಡವಳಿಕೆಗಳ ಪ್ರತಿ ಗುಂಪು ಸಾಲಕ್ಕೆ ಮಾತ್ರ. ರಾಷ್ಟ್ರೀಕೃತ
ಬ್ಯಾಂಕಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು, ಐ.ಎಫ್.ಎ.ಸ್.ಸಿ. ಕೋಡ್‌ನದಾಖಲೆ ಸಲ್ಲಿಸಬೇಕು ಎಂದು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯುಲ್ಲಿ ತಿಳಿಸಿದ್ದಾರೆ.

Emergency Service

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ/ಗಿರಿಜನ ಉಪಯೋಜನೆ ಅಡಿಯಲ್ಲಿ ೬+೧ ಕುರಿ/ಮೇಕೆ ಘಟಕ ಅನುಷ್ಟಾನಗೊಳಿಸಲು ಅರ್ಹಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ ಪರಿಶಿಷ್ಟ
ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಮಹಿಳಾ ಫಲಾನುಭವಿಗಳಿಗೆ ಆದ್ಯತೆ ನೀಡಲಾಗುವದು.
ಫಲಾನುಭವಿಗಳು ಸದರಿ ಅರ್ಜಿಯನ್ನು ಈ ಕಛೇರಿಯಿಂದ ಪಡೆದು ಅ.೧೦ ರ ಒಳಗಾಗಿ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ದೃಢೀಕರಿಸಿ ಸಲ್ಲಿಸುವದು. ಹೆಚ್ಚಿನ ಮಾಹಿತಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ ೦೮೩೧-೨೪೩೧೨೯೪ ಸಂಪರ್ಕಿಸಬಹುದು ಅಥವಾ ತಾವು ಸದಸ್ಯತ್ವವನ್ನು ಹೊಂದಿರುವ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಕಛೇರಿಗಳಲ್ಲಿ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುರಿಗಾರರಿಗೆ ಟೆಂಟ್ ಹಾಗೂ ಇನ್ನಿತರ ಪರಿಕರ ವಿತರಿಸಲು ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಅಲೆಮಾರಿ/ಅರೆಅಲೆಮಾರಿ ಕುರಿ/ಮೇಕೆ ಸಾಕಾಣಿಕೆ ಮಾಡುತ್ತಿರುವ ಕುರಿಗಾರರಿಗೆ ಟೆಂಟ್ ಹಾಗೂ ಇನ್ನಿತರ ಪರಿಕರ ಕಿಟ್‌ಗಳನ್ನು ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಗೆ ಒಟ್ಟು ೧೫ ಗುರಿಗಳನ್ನು ನಿಗದಿಪಡಿಸಲಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ೦೩, ಪರಿಶಿಷ್ಟ ಪಂಗಡ ೦೧ ಇತರೆ ೧೧ ವಲಸೆ ಕುರಿಗಾರರಿಗೆ ವಿತರಿಸಲಾಗುವದು. ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಫಲಾನುಭವಿಗಳು ಸದರಿ ಅರ್ಜಿಯನ್ನು ಈ ಕಛೇರಿಯಿಂದ/ಸಂಬಂಧಿಸಿದ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು ಸ್ಥಳೀಯ ಪಶುವೈದ್ಯಾಧಿಕಾರಿಗಳ ಸಹಿಯೊಂದಿಗೆ ಮತ್ತು ಸಹಾಯಕ ನಿರ್ದೇಶಕರು ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರ ಮೂಲಕ ಈ ಕಛೇರಿಗೆ ಅ ೧೦ ರ ಒಳಗಾಗಿ ಅರ್ಜಿಯೊಂದಿಗೆ ಈ ಕೆಳಕಂಡ ಅವಶ್ಯಕ ದಾಖಲೆಗಳನ್ನು ದೃಢೀಕರಿಸಿ ಲಗತ್ತಿಸಿ ಸಲ್ಲಿಸುವುದು.
ಜಾತಿ ಪ್ರಮಾಣ ಪತ್ರ, ಸಂಘದ ಸದಸ್ಯತ್ವದ ಪ್ರಮಾಣ ಪತ್ರ, ಆಧಾರ ಕಾರ್ಡ ರೇಷನ್ ಕಾರ್ಡ, ಮತದಾರರ ಗುರುತಿನ ಚೀಟಿ, ವಲಸೆ ಕುರಿಗಾರರೆಂಬ ಪ್ರಮಾಣ ಪತ್ರ. ಅರ್ಜಿಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ಆಯಾ ತಾಲೂಕು ಸಹಾಯಕ ನಿರ್ದೇಶಕರುಗಳ ಕಛೇರಿಯಲ್ಲಿ/ನಿಗಮದ ಕಛೇರಿಗಳಲ್ಲಿ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ

 

ಪ್ರತಿ ವರ್ಷ ಡಿಸೆಂಬರ್ ೩ ರಂದು ವಿಶ್ವ ವಿಕಲಚೇತನರ ದಿನಾಚರಣೆ ಯನ್ನು ಆಚರಿಸಲಾಗುತ್ತಿದೆ. ಆ ಪ್ರಯುಕ್ತ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ೧೫ ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ಪ್ರತಿ ವರ್ಷವೂ ರಾಜ್ಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ೧೫ ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ವಿಶೇಷ ಶಿಕ್ಷಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅ. ೧೫ ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಕಾರಣ ಆಸಕ್ತಿಯುಳ್ಳ ವ್ಯಕ್ತಿ/ವಿಶೇಷ ಶಿಕ್ಷಕರು/ ಸಂಸ್ಥೆಯವರು ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್  ನಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ ಪ್ರತಿಯಲ್ಲಿ ಈ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂಖ್ಯೆ ೦೮೩೧-೨೪೭೬೦೯೬/೭ ಗೆ ಸಂಪರ್ಕಿಸುವುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ: ಪ್ರವೇಶಗಳು ಪ್ರಾರಂಭ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ವಿಜಯಪುರ, ಬಾಗಲಕೋಟ,
ಜಮಖಂಡಿ ಹಾಗೂ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳ ಸಂಯೋಜಿತ ಮಹಾವಿದ್ಯಾಲಯಗಳು ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸಗಳಿಗಾಗಿ ೨೦೨೦-೨೧ ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗಾಗಿ ಔಟಿಟiಟಿe ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್‌ಸೈಟ್   ಮತ್ತು ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗಗಳಿಂದ ಪಡೆದುಕೊಳ್ಳಬಹುದು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Bottom Add3
Bottom Ad 2