Reporter wanted
Crease wise (28th Jan)

ವಿವಿಧ ದೇವಸ್ಥಾನಗಳ ಕಾಲಂ ಪೂಜೆ ನೆರವೇರಿಸಿದ ಲಕ್ಷ್ಮಿ ಹೆಬ್ಬಾಳಕರ್

ತಲಾ 10 ಲಕ್ಷ ರೂ. ವೆಚ್ಚ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಟ್ಟಿ ಗ್ರಾಮದಲ್ಲಿ ತಲಾ 10 ಲಕ್ಷ ರೂ,ಗಳ ವೆಚ್ಚದಲ್ಲಿ‌ ನಿರ್ಮಾಣ ಹಂತದಲ್ಲಿರುವ ಶ್ರೀ ರಾವಳನಾಥ ಮತ್ತು ಶ್ರೀ ಸಾತೇರಿ ಮಂದಿರ ಹಾಗೂ ಶ್ರೀ ಮಹಾಲಕ್ಷ್ಮಿ ಮಂದಿರಗಳ ಕಟ್ಟಡ  ಕಾಲಂ ಪೂಜೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೋಮವಾರ ನೆರವೇರಿಸಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಇಲ್ಲಿಯ ಜನರು ಅಭಿವೃದ್ಧಿ ಪರವಾಗಿರುವವರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಶಾಸಕಿಯಾಗಿ ನಾನು ನನ್ನ ಕರ್ತವ್ಯ ಮಾಡುತ್ತಿದ್ದೇನೆ. ಆದಾಗ್ಯೂ ಜನರು ತೋರಿಸುತ್ತಿರುವ ಪ್ರಾತಿ, ವಾತ್ಸಲ್ಯ ನೋಡಿದರೆ ಹೃದಯ ತುಂಬಿ ಬರುತ್ತದೆ. ನಿಜ ಅರ್ಥದಲ್ಲಿ ನೀವೆಲ್ಲ ನನ್ನನ್ನು ಮನೆಮಗಳಾಗಿ ಸ್ವೀಕರಿಸಿದ್ದೀರಿ ಎಂದು ಹೆಬ್ಬಾಳಕರ್ ಭಾವುಕರಾಗಿ ನುಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು,  ಕಾರ್ಯಕರ್ತರು ಹಾಗೂ ದೇವಸ್ಥಾನದ ಕಮೀಟಿಯವರು ಉಪಸ್ಥಿತರಿದ್ದರು.