Advertisement -Home Add

ಎಮ್ -ಸ್ಯಾಂಡ್ ಅಸೋಸಿಯೇಶನ್ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲಾ ಪದಾಧಿಕಾರಿಗಳು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ ಎಮ್ -ಸ್ಯಾಂಡ್ ಅಸೋಸಿಯೇಶನ್ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ಚಂದ್ರಶೇಖರ ಕೊಣ್ಣೂರ ಆಯ್ಕೆಗೊಂಡಿದ್ದಾರೆ.
ಇತ್ತೀಚೆಗೆ ಸವದತ್ತಿ ತಾಲೂಕಿನ ಯರಗಟ್ಟಿಯಲ್ಲಿ ನಡೆದ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿ ಅವರನ್ನು ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಸಂಜುಗೌಡ ಕುಪ್ಪಸಗೌಡರ, ಕಾರ್ಯದರ್ಶಿಯಾಗಿ ಪಾಂಡುರಂಗ ರಡ್ಡಿ, ಖಜಾಂಚಿಯಾಗಿ ಶ್ರೀಶೈಲ ವರ್ಜಿ ಅವರು ಆಯ್ಕೆಗೊಂಡರು.