Advertisement -Home Add

ಸಂಸದ ಅನಂತಕುಮಾರ ಹೆಗಡೆ ಕಾರ್ಯಕ್ರಮಕ್ಕೆ ಶಾಸಕಿ ಅಂಜಲಿ ನಿಂಬಾಳಕರ್ ಬೆಂಬಲಿಗರಿಂದ ಅಡ್ಡಿ

ಅಂಜಲಿ ನಿಂಬಾಳಕರ್ ಬದಿಗಿಟ್ಟು ಕಾರ್ಯಕ್ರಮ ಆಯೋಜನೆ

 

 ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಖಾನಾಪುರ ತಾಲೂಕಿನಲ್ಲಿ ಸಂಸದ ಅನಂತಕುಮಾರ ಹೆಗಡೆ ನಡೆಸಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಶಾಸಕಿ ಅಂಜಲಿ ನಿಂಬಾಳಕರ್ ಅವರನ್ನು ಆಹ್ವಾನಿಸಿಲ್ಲ ಮತ್ತು ಅವರು ಹೋಮ್ ಕ್ವಾರಂಟೈನ್ ನಲ್ಲಿರುವಾಗ ಉದ್ದೇಶಪೂರ್ವಕವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ಹಿನ್ನೆಲೆಯಲ್ಲಿ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಭೂಮಿ ಪೂಜೆಯನ್ನು ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
ಭೂಮಿ ಪೂಜೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ ಎಂದು ಕಾರ್ಯಕರ್ತರು ಧರಣಿ ನಡೆಸಿದರು. ಕಾರ್ಯಕ್ರಮಕ್ಕೆ ಅಡ್ಡಿಪಡಿಸಲೆತ್ನಿಸಿದರು. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತೆ ಕ್ರಮವಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದು, ಬಿಗಿ ಬಂದೋಬಸ್ತೆ ಏರ್ಪಡಿಸಲಾಗಿದೆ.