Crease wise (28th Jan)
KLE1099 Add

4 ಕಾಮಗಾರಿಗಳ ತುರ್ತು ಮಂಜೂರಾತಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕೋರಿಕೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಆಗಿರುವ ಎಲ್.ಕೆ.ಅತೀಕ್ ಗೆ ಪತ್ರ

Anand Ads 3 (3)
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವು ಯೋಜನೆಗಳನ್ನು ಮಂಜೂರು ಮಾಡುವಂತೆ ಕೋರಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಆಗಿರುವ ಎಲ್.ಕೆ.ಅತೀಕ್ ಪತ್ರ ನೀಡಿದ್ದಾರೆ.
ಬುಧವಾರ ಬೆಳಗಾವಿಗೆ ಆಗಮಿಸಿರುವ ಅತೀಕ್ ಅವರನ್ನು ಭೇಟಿ ಮಾಡಿದ ಹೆಬ್ಬಾಳಕರ್, 3.50 ಕೋಟಿ ರೂ. ವೆಚ್ಚದಲ್ಲಿ ಹಿಂಡಲಗಾ ವ್ಯಾಪ್ತಿಯ ಜಯನಗರ ನಾಲಾ ನಿರ್ಮಾಣ ಕಾಮಗಾರಿ ಮತ್ತು 1.50 ಕೋಟಿ ರೂ. ವೆಚ್ಚದಲ್ಲಿ ಸಿದ್ದೇಶ್ವರ ನಗರದ ರಜಾತ್ ಕಾಲನಿ ನಾಲಾ ನಿರ್ಮಾಣ ಕಾಮಗಾರಿಗಳನ್ನು ಸ್ಮಾರ್ಟ್ ಸಿಟಿ
 ಯೋಜನೆಯಲ್ಲಿ ಕೈಗೆತ್ತಿಕೊಳ್ಳುವಂತೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡುವಂತೆ ಲಕ್ಷ್ಮಿ ಹೆಬ್ಬಾಳಕರ್ ವಿನಂತಿಸಿದರು.
 ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಲಗಾ ಮತ್ತು ಬಸ್ತವಾಡ ಗ್ರಾಮಗಳು ಸುವರ್ಣ ವಿಧಾನಸೌಧದ ಎದುರಗಡೆ ಬರುತ್ತಿದ್ದು, ಈ ಎರಡು ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸುವರ್ಣ ವಿಧಾನಸೌಧಕ್ಕೆ ಹಿಡಕಲ್ ಡ್ಯಾಂನಿಂದ ನೀರು ಪೂರೈಕೆಯಾಗುತ್ತಿದ್ದು, ಹತ್ತಿರದಲ್ಲೆ ಇರುವ ಈ ಎರಡು ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಆದ್ದರಿಂದ ಈ ಎರಡು ಗ್ರಾಮಗಳಲ್ಲಿ ಜಲಜೀವನಮಿಶನ್ ಯೋಜನೆಯಡಿಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಬೇಕು. ಆ ನೀರನ್ನು ಬಾವಿಯಲ್ಲಿ ಸಂಗ್ರಹ ಮಾಡಿ ಕುಡಿಯಲು ಗ್ರಾಮಗಳ ಜನರಿಗೆ ಪೂರೈಕೆ ಮಾಡಬೇಕು. ಈ ಕುರಿತು ಕೂಡಲೇ ವ್ಯವಸ್ಥೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಬೇಕು ಎಂದು ಅತೀಕ್ ಅವರನ್ನು ಹೆಬ್ಬಾಳಕರ್ ಕೋರಿದರು.
 ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಿರೇಬಾಗೇವಾಡಿ ಗ್ರಾಮ ಪಂಚಾಯತ ಕಟ್ಟಡವು ತುಂಬಾ ಹಳೆಯದಾಗಿದ್ದು, ಗೋಡೆಗಳು ಬಿರುಕಾಗಿದೆ. ಮೇಲ್ದಾವಣಿ ಸಹ ಶಿಥಿಲಗೊಂಡಿದೆ. ಮಳೆಗಾಲದಲ್ಲಿ ಕಟ್ಟಡ ಸೋರಿಕೆಯಾಗುತ್ತಿದೆ. ಆದ್ದರಿಂದ ಗ್ರಾಮ ಪಂಚಾಯತ ಕಟ್ಟಡವನ್ನು ನೆಲಸಮಗೊಳಿಸಿ ಅದೇ ಜಾಗದಲ್ಲಿ ಹೊಸದಾಗಿ ಕಟ್ಟಡ ನಿರ್ಮಿಸಲು ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸರ್ಮಾನುಮತದಿಂದ ಠರಾವನ್ನು ಪಾಸ್ ಮಾಡಲಾಗಿದೆ. ಕಾರಣ ಹೊಸ ಕಟ್ಟಡವನ್ನು ನಿರ್ಮಿಸಲು ಅನುದಾನವನ್ನು ಮಂಜೂರು ಮಾಡಬೇಕು ಎಂದು ಲಕ್ಷ್ಮಿ ಹೆಬ್ಬಾಳಕರ್ ವಿನಂತಿಸಿದರು.