Advertisement -Home Add

ಗ್ರಾಮೀಣ ಕ್ಷೇತ್ರದಲ್ಲಿ ಈ ಹಿಂದೆ ಅನುದಾನದ ಸದುಪಯೋಗವೇ ಆಗಿಲ್ಲ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್  

ಜನರ ಸಹಕಾರದಿಂದ ಸಾವಿರಾರು ಕೋಟಿ ರೂ. ಅನುದಾನ ತಂದು ಕೆಲಸ ಮಾಡಲು ಸಾಧ್ಯವಾಗಿದೆ

ಜನರ ಸಹಕಾರದಿಂದ ಸಾವಿರಾರು ಕೋಟಿ ರೂ. ಅನುದಾನ ತಂದು ಕೆಲಸ ಮಾಡಲು ಸಾಧ್ಯವಾಗಿದೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆ ಎಚ್ ಬಿ ಕಾಲೋನಿಯಲ್ಲಿ ಹಲವಾರು ವರ್ಷಗಳಿಂದ ಅಭಿವೃದ್ಧಿಯನ್ನೇ ಕಾಣದ ರಸ್ತೆಗಳಿಗೆ ಇಂದು ಚಾಲನೆ ನೀಡಲಾಯಿತು.
 ಹೌಸಿಂಗ್ ಬೋರ್ಡ್ ಫಂಡ್‌ ವತಿಯಿಂದ ಸುಮಾರು 1.40 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ಚಾಲನೆಯನ್ನು‌ ನೀಡಲಾಯಿತು.
ಗ್ರಾಮೀಣ ವಿಧಾನಸಭಾ ಕ್ಷೇತ್ರವನ್ನು ಸುತ್ತು ಹಾಕಿದರೆ ಈವರೆಗೂ ಏಕೆ ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಲಿಲ್ಲ ಎನ್ನುವುದೇ ಅರ್ಥವಾಗುತ್ತಿಲ್ಲ. ಸರಕಾರದ ಅನುದಾನವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನವೇ ಆಗಲಿಲ್ಲ. ನಾನು ಶಾಸಕಿಯಾಗಿ ಆಯ್ಕೆಯಾದ ನಂತರ ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೆ ಕೆಲಸ ಮಾಡುತ್ತಿದ್ದೇನೆ. ಯಾವ ಯಾವ ಯೋಜನೆಗಳಲ್ಲಿ ಅನುದಾನ ತರಲು ಸಾಧ್ಯವಿದೆಯೇ ಒಂದನ್ನೂ ಬಿಡುತ್ತಿಲ್ಲ. ಮೊದಲ ಬಾರಿಗೆ ಶಾಸಕಿಯಾದರೂ ಹಲವಾರು ಹಿರಿಯ ಶಾಸಕರೂ ತರದಷ್ಟು ಅನುದಾನವನ್ನು ತಂದಿದ್ದೇನೆ. ನಿಮ್ಮೆಲ್ಲರ ಸಹಕಾರದಿಂದ ನನಗೆ ಸಾವಿರಾರು ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಅವಿನಾಶ್ ಬೆಲ್ಲದ, ಭೂಪಾಲಿ, ಗುತ್ತಿಗೆದಾರರು ಹಾಗೂ​ ಕಾರ್ಯಕರ್ತರು ಉಪಸ್ಥಿತರಿದ್ದರು.
​