Advertisement -Home Add

ಸಂತೋಷ ಅರಳಿಕಟ್ಟಿ ನಿಧನ

ಘಟಪ್ರಭಾ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ

ಪ್ರಗತಿವಾಹಿನಿ ಸುದ್ದಿ, ಘಟಪ್ರಭಾ ಕರ್ನಾಟಕ ರಕ್ಷಣಾ ವೇದಿಕೆ( ಸಂತೋಷ ಅರಳಿಕಟ್ಟಿ ಬಣ)ದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸಂತೋಷ ಭೋಜಪ್ಪ ಅರಳಿಕಟ್ಟಿ ಅವರು ಸೋಮವಾರ ರಾತ್ರಿ ನಿಧನರಾದರು.
ಕಳೆದ ಹಲವು ವರ್ಷದಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಘಟಪ್ರಭಾ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರಿಗೆ ಪತ್ನಿ ಇಬ್ಬರು ಪುತ್ರರು, ಸಹೋದರರು ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.
ಕೊರೋನಾ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. ಆದರೆ ಹೃದಯಾಘಾತದಿಂದ ಅವರು ಕೊನೋಯುಸಿರೆಳೆದರು ಎಂದು ಪುತ್ರ ಪ್ರಶಾಂತ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.