Kannada Rajyotsava – Home Add
Valmiki Jayanti Add

ಭಾನುವಾರ ಹಲವು ಸಮುದಾಯ ಭವನಗಳಿಗೆ ಶಂಕುಸ್ಥಾಪನೆ

ಶಾಸಕ ಮಹಾಂತೇಶ ದೊಡ್ಡಗೌಡರ್ ಭಾಗಿ

ಪ್ರಗತಿವಾಹಿನಿ ಸುದ್ದಿ, ಕಿತ್ತೂರು  -ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ್ ಭಾನುವಾರ ವಿವಿಧೆಡೆ ಸಮುದಾಯ ಭವನಗಳ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.
11 ಗಂಟೆಗೆ ಕಡತನಾಳ ಗ್ರಾಮದಲ್ಲಿ ಶಾಸಕರ ನಿಧಿಯಿಂದ 5 ಲಕ್ಷ ರೂ. ವೆಚ್ಚದಲ್ಲಿ ಶ್ರೀ ದುರದುಂಡೇಶ್ವರ ಮಠದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ನಂತರ
ಶ್ರೀ ಬೀರದೇವರ ದೇವಸ್ಥಾನದ ಹತ್ತಿರ 5 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮನಡೆಸಲಿದ್ದಾರೆ.
12:30ಕ್ಕೆ  ಕಲಬಾಂವಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಯಲ್ಲಾಲಿಂಗೇಶ್ವರ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಯ  ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಲಿದ್ದಾರೆ.