KLE1099 Add

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಆಕ್ಷೇಪಣೆ ಸಲ್ಲಿಸಲು ಅವಕಾಶ

Beereshwara 6

ಖಾನಾಪುರ ತಾಲೂಕು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಖಾನಾಪುರ ತಾಲೂಕು ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಗುರುತಿಸಿ ಆಯ್ಕೆ ಪಟ್ಟಿಯನ್ನು ತಾಲೂಕಾ ಕಚೇರಿ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯತಿಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಜ.೧೨ ರಂದು ಪ್ರಕಟಿಸಲಾಗಿದೆ.

ಖಾನಾಪುರ ತಾಲೂಕು ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಜುಲೈ ೧೪ ೨೦೨೧ ರಂದು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಂಧಪಟ್ಟಂತೆ ಆಕ್ಷೇಪಣೆಗಳು ಇದ್ದಲ್ಲಿ ಜನವರಿ ೨೭ ಸಂಜೆ ೫.೩೦ ಗಂಟೆಯ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಖಾನಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.

ಅವಧಿ ಮೀರಿ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಖಾನಾಪುರ ಅಂಕಾಕ/ಅಂಸ ಆಯ್ಕೆ ಸಮಿತಿಯ ಸದಸ್ಯಕಾರ್ಯದರ್ಶಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಕಾಗವಾಡ ತಾಲೂಕು

ಕಾಗವಾಡ ತಾಲೂಕು ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಗುರುತಿಸಿ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಗ್ರಾಮ ಪಂಚಾಯತ್, ಅಂಗನವಾಡಿ ಕೇಂದ್ರದಲ್ಲಿ ಹಾಗೂ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಕಾಗವಾಡ ತಾಲೂಕು ವ್ಯಾಪ್ತಿಯ ಖಾಲಿ ಇರುವ ೦೪ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬ ಸಹಾಯಕಿಯರ ಹುದ್ದೆಗಳಿಗೆ ಜುಲೈ ೧೩ ೨೦೨೧ ರಂದು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಸೆ.೦೪ ೨೦೨೧ ರಂದು ಕರೆಯಲಾದ ಆನ್‌ಲೈನ್ ಅರ್ಜಿ ಆಹ್ವಾನವು ಆಕ್ಷೇಪಣೆಯಾಗಿ ಉಳಿದ ೦೧ ಅಂಗನವಾಡಿ ಕಾರ್ಯಕರ್ತೆ ಮತ್ತು ೦೧ ಅಂಗನವಾಡಿ ಸಹಾಯಕಿ ಹುದ್ದೆಗೆ ಆಕ್ಷೇಪಣೆ ಬಂದ ಅರ್ಜಿಗಳನ್ನು ಪರಿಶೀಲಿಸಲಾಗಿದೆ. ಜ.೭ ರಂದು ಆಯ್ಕೆ ಸಮಿತಿ ಸಭೆಯಲ್ಲಿ ನಿಯಮಾನುಸಾರ ಪರಿಶೀಲಿಸಿ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.

ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಂಧಪಟ್ಟಂತೆ ಆಕ್ಷೇಪಣೆಗಳು ಇದ್ದಲ್ಲಿ ಜನವರಿ ೨೭ ಸಂಜೆ ೫.೩೦ ಗಂಟೆಯ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಕಾಗವಾಡ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.

ಅವಧಿ ಮೀರಿ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಾಗವಾಡ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ರಾಯಬಾಗ ತಾಲೂಕು

ರಾಯಬಾಗ ತಾಲೂಕು ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಗುರುತಿಸಿ ಆಯ್ಕೆ ಪಟ್ಟಿಯನ್ನು ಫಲಕದಲ್ಲಿ ಪ್ರಕಟಿಸಲಾಗಿದೆ.

ರಾಯಬಾಗ ತಾಲೂಕು ವ್ಯಾಪ್ತಿಯ ಖಾಲಿ ಇರುವ ೦೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೭ ಸಹಾಯಕಿಯರ ಹುದ್ದೆಗಳಿಗೆ ಜುಲೈ ೧೩ ೨೦೨೧ ರಂದು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಸೆ.೦೪ ೨೦೨೧ ರಂದು ಕರೆಯಲಾದ ಆನ್‌ಲೈನ್ ಅರ್ಜಿ ಆಹ್ವಾನವು ಆಕ್ಷೇಪಣೆಯಾಗಿ ಉಳಿದ ೦೧ ಅಂಗನವಾಡಿ ಕಾರ್ಯಕರ್ತೆ ಮತ್ತು ೦೧ ಅಂಗನವಾಡಿ ಸಹಾಯಕಿ ಹುದ್ದೆಗೆ ಆಕ್ಷೇಪಣೆ ಬಂದ ಅರ್ಜಿಗಳನ್ನು ಪರಿಶೀಲಿಸಲಾಗಿದೆ. ಒಟ್ಟು ೦೪ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೧೭ ಸಹಾಯಕಿ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ೦೧ ಸಹಾಯಕಿ ಹುದ್ದೆ ಮರುಪ್ರಕಟಣೆ ಮಾಡಲಾಗಿದೆ.

ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಂಧಪಟ್ಟಂತೆ ಆಕ್ಷೇಪಣೆಗಳು ಇದ್ದಲ್ಲಿ ಜನವರಿ ೨೭ ಸಂಜೆ ೫.೩೦ ಗಂಟೆಯ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ರಾಯಬಾಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ, ಕಾರ್ಯಾಲಯಕ್ಕೆ ಸಲ್ಲಿಸಲು ತಿಳಿಸಲಾಗಿದೆ.

ಅವಧಿ ಮೀರಿ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಾಲೂಕಾ ಅಂಕಾಕ/ಸ ಆಯ್ಕೆ ಸಮಿತಿ ಹಾಗೂ ರಾಯಬಾಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ವೇತನ ಹೆಚ್ಚಳಕ್ಕೆ ಸಮ್ಮತಿ ನೀಡಿದ ಸಿಎಂ

 

You cannot copy content of this page