Beereshwara add 5
Crease wise add 8
KLE1099 Add

ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಇಬ್ಬರು ಅಧಿಕಾರಿಗಳು

ಅಥಣಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಹಿರಿಯ ಅಧಿಕಾರಿಗಳು

ಅಥಣಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಹಿರಿಯ ಅಧಿಕಾರಿಗಳು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ – ಇಬ್ಬರೂ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ಮ್ಯಾನೇಜರ್ ದೀಪಕ ಕೃಷ್ಣಾಜಿ ಕುಲಕರ್ಣಿ ಇವರು ಗುತ್ತಿಗೆದಾರ ಒಬ್ಬರಿಂದ ರೂ. 68,000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿಯಿಂದ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಇಲಾಖೆ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರ ಒಬ್ಬರಿಂದ ಇಬ್ಬರೂ ಅಧಿಕಾರಿಗಳು ಶೇ.3 ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.

ಸೆ.26ರಂದು ದಿ.ಸುರೇಶ ಅಂಗಡಿ ಪುತ್ಥಳಿ ಅನಾವರಣ: ಸಿಎಂ ಸೇರಿ ಹಲವು ಗಣ್ಯರ ಆಗಮನ

ರಿಕ್ಷಾ ಚಾಲಕನಿಗೆ 12 ಕೋಟಿ ರೂ. ಲಾಟರಿ