ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ದೇಶದಲ್ಲಿ 5ಜಿ ಸೇವೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಕಂಪನಿಗಳ ಹೆಸರು ಹೇಳಿ ವಂಚಿಸುವವರಿಂದ ಸಾರ್ವಜನಿಕರು ಮೋಸ ಹೋಗದಂತೆ ಎಚ್ಚರ ವಹಿಸಬೇಕು ಎಂದು ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ದೇಶದಲ್ಲಿ 5 ಜಿ ಸೇವೆ ಆರಂಭಗೊಂಡಿದ್ದು, ಯಾರಾದರೂ ನಿಮ್ಮ ಸಿಮ್ ಅನ್ನು 4 ಜಿ ಇಂದ 5 ಜಿಗೆ ಅಪ್ ಡೇಟ್ ಮಾಡುತ್ತೇವೆ ಎಂದು ಲಿಂಕ್ ಕಳುಹಿಸಿ ಒಟಿಪಿ ಪಡೆದು ಬಳಿಕ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣ ದೋಚುವ ಅಪಾಯವಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಯಾರಿಗೂ ಒಟಿಪಿ ಕೊಡಬಾರದು, ಲಿಂಕ್ ಗಳನ್ನು ಕ್ಲಿಕ್ ಮಾಡಬಾರದು, ಮತ್ತು ಫೋನ್ ಕರೆ ಮಾಡಿದವರಿಗೆ ಬ್ಯಾಂಕ್ ಖಾತೆಯ ವಿವರಗಳನ್ನು ಕೊಡಬಾರದು ಎಂದು ಎಚ್ಚರಿಸಿದ್ದಾರೆ.
https://pragati.taskdun.com/latest/belagavisoldger-diedshrinagar/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ