Belagavi NewsBelgaum News

*ಮದ್ಯ ಮಾರಾಟ ನಿಷೇಧ: ಕಮಿಷನರ್ ಆದೇಶ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಮೇ.1 ರಂದು ಶ್ರೀ ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ.1 ಬೆಳಗ್ಗೆ 6 ರಿಂದ ಮೇ. 2 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯದ ಮಾರಾಟ ನಿಷೇಧಿಸಿ, ಆದೇಶ ಹೊರಡಿಸಲಾಗಿದೆ.

ಅಂಗಡಿಗಳಲ್ಲಿ, ವೈನ್ ಶಾಪ್, ಬಾರ್‌ಗಳಲ್ಲಿ, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್ ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‌ಬಿಸಿಎಲ್ ಡಿಪೋಗಳನ್ನು, ಹೊಟೇಲ್‌ಗಳಲ್ಲಿರುವ ಬಾಗರ್‌ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದು.

ಬೆಳಗಾವಿ ತಾಲೂಕಿನಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶವನ್ನು ಹೊರಡಿಸಲಾಗಿರುತ್ತದೆ.

ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button