Kannada NewsLatest

ರೌಡಿ ಶೀಟರ್ ಗಳ ಮನೆ ಮೇಲೆ ಬೆಳಗಾವಿ ಪೊಲೀಸರ ದಾಳಿ; ರೌಡಿ ಶೀಟರ್ ಮನೆಯಲ್ಲಿ ಮಾರಕಾಸ್ತ್ರ ಪತ್ತೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರದಲ್ಲಿ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಿದ್ದು ಈ ವೇಳೆ ಒಬ್ಬ ರೌಡಿ ಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ.

ನಗರದ 12 ಪೊಲೀಸ್ ಠಾಣೆಗಳ ವ್ಯಾಪ್ತಿಯ ಸುಮಾರು 70 ರೌಡಿ ಶೀಟರ್ ಗಳ ಮನೆಗೆ ಪೊಲೀಸರು ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಚ್.ಟಿ ಶೇಖರ್ ನೇತೃತ್ವದಲ್ಲಿ ಏಕಕಾಲಕ್ಕೆ ಹಠಾತ್ ದಾಳಿ ನಡೆಸಿದರು. ಖಡೇಬಜಾರ್ ಠಾಣೆ ಎಸಿಪಿಗಳು ಮತ್ತು ಪಿಎಸ್ ಐಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ದಾಳಿ ವೇಳೆಗೆ ಖಡೇಬಜಾರ್ ಪೊಲೀಸ್ ಠಾಣೆ ರೌಡಿ ಶೀಟರ್ ಒಬ್ಬನ ಮನೆಯಲ್ಲಿ ಎರಡು ತಲವಾರುಗಳು ಪತ್ತೆಯಾಗಿದ್ದು ಅವುಗಳನ್ನು ವಶಕ್ಕೆ ಪಡೆದು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಲ್ಲ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ಸಂದೇಶ ನೀಡಿರುವ ಪೊಲೀಸರು ಚುನಾವಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.

Home add -Advt

ನಗರದಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ತಿರುಗುವವರ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು ಭಯಮುಕ್ತ, ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿರುವುದಾಗಿ ಬೆಳಗಾವಿ ನಗರ ಪೋಲಿಸ್ ಆಯುಕ್ತ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.

https://pragati.taskdun.com/rahul-refused-to-enter-the-temple-after-touching-fish/

https://pragati.taskdun.com/man-sentenced-to-life-imprisonment-for-double-murder/
https://pragati.taskdun.com/varunasiddaramanahundiclashv-somannasiddaramaiah/

Related Articles

Back to top button