Kannada News

*ರಾಜ್ಯಕ್ಕೆ ಮಾದರಿಯಾದ ಬೆಳಗಾವಿ ಜಿಲ್ಲಾ ಪೊಲೀಸ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೆಲ ಫೋನ್ ಇನ್ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಎಸ್ಪಿ ಡಾ. ಸಂಜೀವ ಪಾಟೀಲ ತಂಡ ಶುಕ್ರವಾರ ನಡೆಸಿದ 12ನೇ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಜನಸ್ನೇಹಿ ಪೊಲೀಸ್ ಆಡಳಿತಕ್ಕೆ ಹೆಸರುವಾಸಿಯಾಗಿರುವ ಬೆಳಗಾವಿ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಇನ್ನೂ ಹತ್ತಿರವಾಗುವ ನಿಟ್ಟಿನಲ್ಲಿ ನಡೆಸುತ್ತಿರುವ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನರು ಮುಕ್ತವಾಗಿ ಕುಟುಂಬ ಸಮಸ್ಯೆ, ಗಂಡ, ಹೆಂಡತಿಯ ಜಗಳ, ಸಂಚಾರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ರಸ್ತೆ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಯನ್ನು ಹೇಳಿಕೊಂಡು ಜನರು ಎಸ್ಪಿ ಎದುರು ಅಳಲು ತೋಡಿಕೊಂಡರು.

ಮುಗಳಖೋಡ ವ್ಯಕ್ತಿಯೊರ್ವ ಕರೆ ಮಾಡಿ ವಾಣಿಜ್ಯ ಮಳಿಗೆಗಳು ನಾಮಫಲಕಗಳು ಮಳೆ ಗಾಳಿಗೆ ರಸ್ತೆಯ ಬದಿಗೆ ಬಂದು ಬಿಳುತ್ತಿವೆ. ಅವುಗಳನ್ನು ತೆರವುಗೊಳಿಸುವಂತೆ ಎಸ್ಪಿ ಅವರಿಗೆ ಕರೆ ಮಾಡಿ ದೂರಿದರು. ಇದಕ್ಕೆ ಸ್ಪಂದಿಸಿದ ಎಸ್ಪಿ ಸಂಬಂಧಿಸಿದವರಿಗೆ ಸೂಚನೆ ನೀಡಿ ತೆರವು ಮಾಡುವುದಾಗಿ ತಿಳಿಸಿದರು.

ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ವ್ಯಕ್ತಿಯೊರ್ವ ಕರೆ ಮಾಡಿ ಗ್ರಾಪಂನಲ್ಲಿನ ಸಿಬ್ಬಂದಿಯೊಬ್ಬರು ಜಾತಿ ನಿಂಧನೆ ಮಾಡಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ದೂರಿದರು. ಇದಕ್ಕೆ ಸ್ಪಂದಿಸಿದ ಎಸ್ಪಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡುವಂತೆ ತಿಳಿಸಿದರು.

ನಗರ ಪ್ರದೇಶದ ವ್ಯಕ್ತಿಯೊರ್ವ ಕರೆ ಮಾಡಿ ಕಾಲೇಜು ರಸ್ತೆಯ ಪಕ್ಕದಲ್ಲಿರುವ ರಸ್ತೆ, ಸರದಾರ್ಸ ಮೈದಾನ ಮುಂಭಾಗದಲ್ಲಿ ಸಾಕಷ್ಟು ಸಂಚಾರ ಸಮಸ್ಯೆಯಾಗುತ್ತಿದೆ. ಈ ಕುರಿತು ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಎಸ್ಪಿ ಇದು ನಗರ ಪೊಲೀಸ್ ಇಲಾಖೆಗೆ ಬರುವುದರಿಂದ ಪೊಲೀಸ್ ಆಯುಕ್ತರ ಗಮನಕ್ಕೆ ತರಲಾಗುವುದು ಎಂದರು.

ಟಿಳಕವಾಡಿ ನಿವೃತ್ತ ಅಧಿಕಾರಿಯೊಬ್ಬರು ಕರೆ ಮಾಡಿ, ಎರಡನೇ ರೈಲ್ವೆ ಗೆಟ್ ಬಳಿ ಅಡ್ಡಲಾಗಿ ನಿರ್ಮಿಸಲಾಗಿರುವ ಬ್ಯಾರಿಕೇಡ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಳೆದೊಂದುವರೆ ವರ್ಷದಿಂದ ಇದನ್ನು ತೆರವು ಮಾಡಬೇಕೆಂದು ಇಲ್ಲಿನ ನಾಗರಿಕರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಆದರೆ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಸಮಸ್ಯೆ ಬಗೆ ಹರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಸ್ಪಿ ಎದುರು ಅಳಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಎಸ್ಪಿ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವುದು ಬೇಡ. ನಿಮ್ಮ ಸಮಸ್ಯೆಯನ್ನು ಪೊಲೀಸ್ ಆಯುಕ್ತರಿಗೆ ತಿಳಿಸಲಾಗುವುದಾಗಿ ಹೇಳಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ವೇಣುಗೋಪಾಲ, ಪೊಲೀಸ್ ಸಿಬ್ಬಂದಿಗಳಾದ ಡಿಎಸ್ಪಿ ಜೇಮ್ಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

https://pragati.taskdun.com/businessmansuicidekuradharanadi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button