Belagavi NewsBelgaum NewsNational

*ಬೆಳಗಾವಿಯಿಂದ ಹೊರಟಿದ್ದ ಬಸ್ ನಲ್ಲಿ ಬೆಂಕಿ ಅವಘಡ: ಓರ್ವ ಪ್ರಯಾಣಿಕ ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಮಹರಾಷ್ಟ್ರದ ಕೊಲ್ಲಾಪುರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದಾರೆ.

ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಬಸ್ ನಲ್ಲಿ ಈ ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರದ ಬಳಿ ತಡರಾತ್ರಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ, ಬಹುತೇಕ ಎಲ್ಲಾ ಪ್ರಯಾಣಿಕರು ಬಸ್ ನಿಂದ ಕೆಳಗಿಳಿದಿದ್ದಾರೆ. ಆದರೆ ಓರ್ವ ಪ್ರಯಾಣಿಕ ಬಸ್ ನಲ್ಲಿ ಸಿಲುಕಿಕೊಂಡಿದ್ದು, ಬೆಂಕಿಯಲ್ಲಿ ಸುಟ್ಟು ಹೋಗಿದ್ದಾನೆ.

ಬೆಂಕಿ ಅವಘಡದಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿದೆ. ಮೃತ ಪ್ರಯಾಣಿಕನ ಗುರುತು ಪತ್ತೆಯಾಗಿಲ್ಲ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button