Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಮತ್ತೊಂದು ಅವಘಡ: ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಧರೆಗುರುಳಿದ ಬೃಹತ್ ಮರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಮಳೆ ಅಬ್ಬರಕ್ಕೆ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ನಿನ್ನೆಯಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಬೃಹತ್ ಮರ ಧರೆಗುರುಳಿದೆ. ರಸ್ತೆ ಸಂಪೂರ್ಣ ಬಂದ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಮಳೆಯ ನಡುವೆಯೇ ಮಹಾನಗರ ಪಾಲಿಕೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದೆಡೆ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ಸೇತುವೆಗಳು, ರಸ್ತೆಗಳು ಜಲಾವೃತಗೊಂಡಿವೆ. ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button