Belagavi NewsBelgaum NewsKannada NewsKarnataka News
*ಬೆಳಗಾವಿ: ಸರ್ಕಾರಿ ಶಾಲೆ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ವಿವಿಧೆಡೆ ಭಾರಿ ಮಳೆ, ಪ್ರವಾಹ ಭೀತಿಯಿಂದ ಅವಾಂತರಗಳು ಸೃಷ್ಟಿಯಾಗಿವೆ. ನಿರಂತರ ಮಳೆಯಿಂದಾಗಿ ಸರ್ಕಾರಿ ಶಾಲೆಯ ಮೇಲೆ ಬೃಹತ್ ಮರ ಬಿದ್ದ ಘಟನೆ ನಡೆದಿದೆ.
ಖಾನಾಪುರದ ನಂದಗಡ ಗ್ರಾಮದಲ್ಲಿ ಸರ್ಕಾರಿ ಉರ್ದು ಶಾಲೆಯ ಮೇಲೆ ಬೃಹತ್ ಮರ ಬಿದ್ದಿದೆ. ಶಾಲಾ ಕೊಠಡಿ ಮೇಲೆಯೇ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಮಕ್ಕಳು ಶಾಲೆಗೆ ಬರುವ ಮುನ್ನವೇ ಈಘಟನೆ ನಡೆದಿದ್ದರಿಂದ ಭಾರಿ ಅನಾಹುತ ತಪ್ಪಿದೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಮರ ತೆರವು ಕಾರ್ಯ ನಡೆಸಿದ್ದಾರೆ.