Belagavi NewsBelgaum NewsKannada NewsKarnataka NewsLatest

*ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ವಿಧಾನ ಪರಿಷತ್ ನಲ್ಲಿ ಅಂಗೀಕಾರ*


ಪ್ರಗತಿವಾಹಿನಿ ಸುದ್ದಿ:
ಬೆಳಗಾವಿ: ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕಕ್ಕೆ ಮೇಲ್ಮನೆಯಲ್ಲಿ ಡಿ.19ರಂದು ಅಂಗೀಕಾರ ದೊರೆಯಿತು.

ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕ ಜಾರಿ ಮಾಡಲಾಗುತ್ತಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಸದನಕ್ಕೆ ತಿಳಿಸಿದರು.

ಸುಧೀರ್ಘ ಅವಧಿಯ ಚರ್ಚೆಯ ನಂತರ ಪ್ರಸ್ತಾವವನ್ನು ಸಭಾಪತಿಯವರು ಧ್ವನಿಮತಕ್ಕೆ ಹಾಕಿದರು. ಸದಸ್ಯರ ಸಹಮತದೊಂದಿಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.

Home add -Advt

Related Articles

Back to top button