Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಸುವರ್ಣಸೌಧದ ಬಳಿ ಪೊಲೀಸ್ ಕಟ್ಟೆಚ್ಚರ; ಹೈ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಎರಡನೇ ದಿನವಿಂದು. ಸರ್ಕಾರದ ವಿರುದ್ಧ ಸಾಅಲು ಸಾಲು ಪ್ರತಿಭಟನೆಗಳಿಗೆ ವಿವಿಧ ಸಂಘಟನೆಗಳು ಸಜ್ಜಾಗಿವೆ. ಈ ನಡಿವೆ ಬಿಜೆಪಿ ರೈತರೊಂದಿಗೆ ಬೃಹ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ.

ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸುವರ್ಣಸೌಧದ ಬಳಿ ಕಟ್ಟೆಚ್ಚರ ವಹಿಸಲಾಗಿದೆ. 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುವರ್ಣಸೌಧ ಮುಖದ್ವಾರ ಹಾಗೂ ಸುತ್ತಮುತ್ತಲು ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು, ಎಲ್ಲೆಡೆ ಸರ್ಪಗಾವಲು ಹಾಕಲಾಗಿದೆ.

ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್ ಪಿ, ಡಿವೈಎಸ್ ಪಿ, ಇನ್ಸ್ ಪೆಕ್ಟರ್ ಗಳನ್ನು ನಿಯೋಜಿಸಲಾಗಿದೆ. 10 ಕೆ ಎಸ್ ಆರ್ ಪಿ ತುಕಡಿ, 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಸುವರ್ಣಸೌಧಕ್ಕೆ ಪ್ರವೇಶ ನೀಡಲಾಗುತ್ತಿದೆ. ಪಾಸ್ ಇಲ್ಲದವರನ್ನು ಹೊರಕಳುಹಿಸಲಾಗುತ್ತಿದೆ.

Related Articles

Back to top button