ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ವಿಧಾನಮಂಡಲದ ಚಳಿಗಾಲದ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಈಬಾರಿ ಚಳಿಗಾಲದ ಅಧಿವೇಶನ ನಡೆದಿದ್ದು, 52 ಗಂಟೆಗಳ ಕಾಲ ಕಲಾಪ ನಡೆದಿದೆ. ಒಟ್ಟು 149 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ ಎಂದು ತಿಳಿಸಿದರು.
8 ಶಾಸಕರು ಅನುಮತಿ ಪಡೆದು ಸಂಪೂರ್ಣವಾಗಿ ಕಲಾಪಕ್ಕೆ ಗೈರಾಗಿದ್ದರು. ಶೇ.75ರಷ್ಟು ಶಾಸಕರು ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಇನ್ನೂ ಒಂದು ವಾರ ಕಾಲ ಅಧಿವೇಶನ ನಡೆಸುವಂತೆ ಒತ್ತಾಯಗಳು ಕೇಳಿಬಂದಿವೆ. ಮುಂದಿನ ಅಧಿವೇಶನದಲ್ಲಿ ಹೆಚ್ಚು ದಿನ ಕಲಾಪಕ್ಕೆ ಅವಕಾಶ ನೀಡಲಾಗುವುದು. ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗುವುದು ಎಂದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿದ ಸಲಹೆಗಳನ್ನು, ಸದನದಲ್ಲಿ ಶಿಸ್ತು ಪಾಲನೆ ಮಾಡುವಂತೆ ತಿಳಿಸಿದ ಸೂಚನೆಯನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.
ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕ; ಪಕ್ಷಾತೀತವಾಗಿ ಸದನದ ಬಾವಿಗಿಳಿದು ಧರಣಿ ನಡೆಸಿದ ಶಾಸಕರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ