Politics

*ಬೆಳಗಾವಿ ಅಧಿವೇಶನ: ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ*

ಸಿಎಂ ಸಿದ್ದರಾಮಯ್ಯ ಮಾಹಿತಿ

ಪ್ರಗತಿವಾಹಿನಿ ಸುದ್ದಿ: ಅಧಿವೇಶನದಲ್ಲಿ ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗದಗ್ ಜಿಲ್ಲೆಯ ರೋಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆ ಮಿಷದ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು.

Home add -Advt

ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗಿದ್ರೆ CBI ತನಿಖೆಗೆ ಕೊಡ್ಲಿ ಎಂದರು.

ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೆ ತಾನೇ ಎಂದು ಸಿಎಂ ಪ್ರಶ್ನಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button