Belagavi NewsBelgaum NewsKannada NewsKarnataka News

*ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎ ಎಸ್ ಪಿ ಮೇಲೆ ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆಯತ್ತ ನುಗ್ಗಲು ಯತ್ನಿಸಿ ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡು ಕೋಪಗೊಂಡ ಸಿಎಂ ಸಿದ್ದರಾಮಯ್ಯ, ಭದ್ರತೆಗೆ ನಿಯೋಜಿಸಿದ್ದ ಧಾರವಾಡದ ಎ ಎಸ್ ಪಿ ನಾರಾಯಣ ಭರಮನಿ ಅವರಿಗೆ ವೇದಿಕೆ ಮೇಲೆ ಹೊಡೆಯಲೆಂಬಂತೆ ಕೈ ಎತ್ತಿದ್ದ ಘಟನೆ ನಡೆದಿತ್ತು.

ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ ದೂರು ದಾಖಲಿಸಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೂ ದೂರು ಸಲ್ಲಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button