*ಸಿಎಂ ಆಗಮನ ಸಂದರ್ಭದಲ್ಲೇ ಬೆಳಗಾವಿಯಲ್ಲಿ ಕಲ್ಲುತೂರಾಟ: ಎಲ್ಲೆಡೆ ಕಟ್ಟೆಚ್ಚರವಹಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ತಡರಾತ್ರಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ.
ಉರುಸ್ ಮೆರವಣಿಗೆಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ ಕೂಗಿ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ಘೋಷಣೆಗೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆ ಮಾಡಿದ ಸ್ಥಳೀಯ ಹಿಂದು ನಿವಾಸಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮೂಲಕ ದರ್ಗಾಕ್ಕೆ ಹೋಗುತ್ತಿದ್ದ ಮೆರವಣಿಗೆ ಈ ವರ್ಷ ಅನುಮತಿ ಇಲ್ಲದೇ ಖಡಕ್ ಗಲ್ಲಿಗೆ ಎಂಟ್ರಿಯಾಗಿದೆ. ಈ ವೇಳೆ ಐ ಲವ್ ಮೊಹಮ್ಮದ್ ಎಂಬ ಘೋಷಣೆ ಕೂಗಿದ್ದಾರೆ. ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ. ತಮ್ಮ ಏರಿಯಾಕ್ಕೆ ಬಂದು ಘೋಷಣೆ ಕೂಗಿದ್ದು ಯಾಕೆ ಅಂತಾ ಪ್ರಶ್ನೆ ಮಾಡಿದ ಹಿಂದುಗಳ ಮೇಲೆ ಕುಲ್ಲು ತೂರಾಅಟ ನಡೆಸಲಾಗಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರ ಭೇಟಿ ನೀಡಿದ್ದಾರೆ. ಇನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.