Belagavi NewsBelgaum NewsKarnataka NewsLatestPolitics

*ಸಕ್ಕರೆ ಕಾರ್ಖಾನೆಗಳ ಪ್ರಮುಖ ಬೇಡಿಕೆಗಳಿಗೆ ಸರ್ಕಾರದ ಸ್ಪಂದನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಒಕ್ಕೂಟದ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕರ್ನಾಟಕ ರಾಜ್ಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ನಿಯೋಗವು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಕ್ಕರೆ ಉದ್ಯಮ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸಂಬಂಧಿಸಿದ ಅಧಿಕೃತ ಮನವಿ ಪತ್ರವನ್ನು ಸಲ್ಲಿಸಿತು.


ಈ ಮಹತ್ವದ ಸಭೆಯನ್ನು ಸಕ್ಕರೆ ಉದ್ಯಮಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಯೋಜಿಸಿದ್ದರು. ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ಹಾಗೂ ಆಡಳಿತಾತ್ಮಕ ಸವಾಲುಗಳ ಕುರಿತು ಅವರು ಮುಖ್ಯಮಂತ್ರಿಗಳ ಗಮನ ಸೆಳೆದರು.

Home add -Advt

ಸಹಕಾರಿ ಸಕ್ಕರೆ ಕಾರ್ಖಾನೆಗಳ ಬಲವರ್ಧನೆ, ಉದ್ಯಮದ ಸುಸ್ಥಿರ ಬೆಳವಣಿಗೆ ಹಾಗೂ ಕಬ್ಬು ಬೆಳೆಗಾರ ರೈತರ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.


ಒಕ್ಕೂಟದ ಪದಾಧಿಕಾರಿಗಳು ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮಂಡಿಸಿದ ಅಹವಾಲುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ತಾಳ್ಮೆಯಿಂದ ಆಲಿಸಿದರು. ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿರತೆ ಕಾಪಾಡುವುದು ಹಾಗೂ ಕಬ್ಬು ಬೆಳೆಗಾರ ರೈತರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು. ಮನವಿಯಲ್ಲಿನ ಪ್ರತಿಯೊಂದು ಅಂಶವನ್ನು ಕೂಲಂಕಷವಾಗಿ ಪರಿಶೀಲಿಸಿ, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದರು.


ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಲಕ್ಷ್ಮಣ ಸವದಿ ಹಾಗೂ ಬಾಬಾಸಾಹೇಬ್ ಪಾಟೀಲ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮೃಣಾಲ್‌ ಹೆಬ್ಬಾಳಕರ್ ಸೇರಿದಂತೆ ಕರ್ನಾಟಕ ರಾಜ್ಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಪದಾಧಿಕಾರಿಗಳು ಮತ್ತು ವಿವಿಧ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.

Related Articles

Back to top button