Belagavi NewsBelgaum NewsKannada NewsKarnataka NewsLatest

*ಚಳಿಗಾಲ ಅಧಿವೇಶನಕ್ಕೂ ಮುನ್ನ ಸುವರ್ಣಸೌಧಕ್ಕೆ ಕರೆಂಟ್ ಶಾಕ್*: *11 ಲಕ್ಷ ರೂ. ಬಿಲ್ ಬಾಕಿ!*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆಗಳು ಆರಂಭವಾಗಿರುವ ಬೆನ್ನಲ್ಲೇ ಸುವರ್ಣಸೌಧದ ವಿದ್ಯುತ್ ಬಿಲ್ ಬಾಕಿ ವಿಚಾರ ಮುನ್ನೆಲೆಗೆ ಬಂದಿದೆ. ಕಳೆದ ಮೂರು ತಿಂಗಳಿಂದ ಹೆಸ್ಕಾಂಗೆ ಸುಮಾರು 11 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿಯಾಗಿಲ್ಲ. ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಹೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸುವರ್ಣಸೌಧದ ನಿರ್ವಹಣೆಯ ಹೊಣೆ ಲೋಕೋಪಯೋಗಿ ಇಲಾಖೆಯ ಮೇಲಿದೆ. ಆದರೆ, ಸೌಧದ ನಿರ್ವಹಣೆಗಾಗಿ ಸರ್ಕಾರದಿಂದ ವಿಶೇಷ ಅನುದಾನ ನಿಯಮಿತವಾಗಿ ಬಿಡುಗಡೆಯಾಗುತ್ತಿಲ್ಲ. ವಿದ್ಯುತ್ ಬಿಲ್ ಪಾವತಿಸುವಂತೆ ಹೆಸ್ಕಾಂ ಅಧಿಕಾರಿಗಳು ಮೌಖಿಕ ಸೂಚನೆ ನೀಡಿದ್ದಾರೆ.

ಪ್ರತಿ ವರ್ಷ ಸುವರ್ಣಸೌಧದ ನಿರ್ವಹಣೆಗೆ ಸುಮಾರು 2.20 ಕೋಟಿ ರೂಪಾಯಿ ಅಗತ್ಯವಿದೆ. ಈ ವರ್ಷದ ನಿರ್ವಹಣೆಗಾಗಿ ಲೋಕೋಪಯೋಗಿ ಇಲಾಖೆ 2.20 ಕೋಟಿ ರೂಪಾಯಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ, ಆರ್ಥಿಕ ಇಲಾಖೆಯಿಂದ ಇನ್ನೂ ಅನುಮೋದನೆ ದೊರೆತಿಲ್ಲ.

ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಆರಂಭವಾಗಿದ್ದರೂ ನಿರ್ವಹಣಾ ಅನುದಾನ ಬಿಡುಗಡೆಯಾಗದಿರುವುದು ಚರ್ಚೆಗೆ ಕಾರಣವಾಗಿದೆ. ಉತ್ತರ ಕರ್ನಾಟಕದ ಶಕ್ತಿ ಸೌಧ ಎಂದೇ ಕರೆಯಲ್ಪಡುವ ಸುವರ್ಣಸೌಧದ ನಿರ್ವಹಣೆ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬೆಳಗಾವಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button