*ಚಳಿಗಾಲ ಅಧಿವೇಶನಕ್ಕೂ ಮುನ್ನ ಸುವರ್ಣಸೌಧಕ್ಕೆ ಕರೆಂಟ್ ಶಾಕ್*: *11 ಲಕ್ಷ ರೂ. ಬಿಲ್ ಬಾಕಿ!*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆಗಳು ಆರಂಭವಾಗಿರುವ ಬೆನ್ನಲ್ಲೇ ಸುವರ್ಣಸೌಧದ ವಿದ್ಯುತ್ ಬಿಲ್ ಬಾಕಿ ವಿಚಾರ ಮುನ್ನೆಲೆಗೆ ಬಂದಿದೆ. ಕಳೆದ ಮೂರು ತಿಂಗಳಿಂದ ಹೆಸ್ಕಾಂಗೆ ಸುಮಾರು 11 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿಯಾಗಿಲ್ಲ. ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಹೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸುವರ್ಣಸೌಧದ ನಿರ್ವಹಣೆಯ ಹೊಣೆ ಲೋಕೋಪಯೋಗಿ ಇಲಾಖೆಯ ಮೇಲಿದೆ. ಆದರೆ, ಸೌಧದ ನಿರ್ವಹಣೆಗಾಗಿ ಸರ್ಕಾರದಿಂದ ವಿಶೇಷ ಅನುದಾನ ನಿಯಮಿತವಾಗಿ ಬಿಡುಗಡೆಯಾಗುತ್ತಿಲ್ಲ. ವಿದ್ಯುತ್ ಬಿಲ್ ಪಾವತಿಸುವಂತೆ ಹೆಸ್ಕಾಂ ಅಧಿಕಾರಿಗಳು ಮೌಖಿಕ … Continue reading *ಚಳಿಗಾಲ ಅಧಿವೇಶನಕ್ಕೂ ಮುನ್ನ ಸುವರ್ಣಸೌಧಕ್ಕೆ ಕರೆಂಟ್ ಶಾಕ್*: *11 ಲಕ್ಷ ರೂ. ಬಿಲ್ ಬಾಕಿ!*