Kannada NewsLatest

ಶುಭಂ ಶೇಳ್ಕೆ, ಶ್ರೀರಾಮ ಸೇನೆಯ ರಮಾಕಾಂತ್ ಕೊಂಡುಸ್ಕರ್ ಆರೆಸ್ಟ್

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಿಂದೂಸ್ಥಾನ್ ಶ್ರೀರಾಮಸೇನೆ ಸಂಸ್ಥಾಪಕ ರಮಾಕಾಂತ್ ಕೊಂಡುಸ್ಕರ್, ಎಂಇಎಸ್ ಮುಖಂಡ ಶುಭಂ ಶೇಳ್ಕೆ ಸೇರಿದಂತೆ 27 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿಯಲಾಗಿರುವ ಘಟನೆ ವಿರೋಧಿಸಿ ಬೆಳಗಾವಿ ಸಂಭಾಜಿ ವೃತ್ತದ ಬಳಿ ನಿನ್ನೆ ರಾತ್ರಿ ಎಂಇಎಸ್, ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಲ್ಲು ತೂರಾಟ, ವಾಹನಕ್ಕೆ ಬೆಂಕಿ ಹಚ್ಚಿದ್ದರು.

ಮಾಜಿ ಮೇಯರ್ ಶಿವಾಜಿ ಸುಂಠಕರ್, ಶಿವಸೇನೆ ಅಧ್ಯಕ್ಷ ಪ್ರಕಾಶ ಶಿರೋಳ್ಕರ್ ಮೊದಲಾದವರನ್ನು ವಿಚಾರಣೆಗೊಳಪಡಿಸಲಾಗಿದೆ.

ಪ್ರಕರಣ ಸಂಬಂಧ 27 ಜನರನ್ನು ಬಂಧಿಸಲಾಗಿದ್ದು, ತಡ ರಾತ್ರಿಯೇ ಪೊಲೀಸರು ಎಲ್ಲಾ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕಿಡಿಗೇಡಿಗಳ ದುಷ್ಕೃತ್ಯ ಬೆನ್ನಲ್ಲೇ ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಒಂದೆಡೆ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಬೆಳಗಾವಿ: ಪೊಲೀಸರು ತೆಗೆದುಕೊಳ್ಳುವ ಕ್ರಮ ಕಾದು ನೋಡಿ ಎಂದ ಗೃಹ ಸಚಿವ

ಬೆಳಗಾವಿಯಲ್ಲಿ ಕಲ್ಲು ತೂರಾಟ; 3 ಪ್ರಕರಣ ದಾಖಲು; 27 ಜನರ ಬಂಧನ: ನಿಷೇಧಾಜ್ಞೆ ಜಾರಿ

ಆನಗೋಳದಲ್ಲಿ ಮಧ್ಯರಾತ್ರಿ ರಾಯಣ್ಣ ಮೂರ್ತಿ ಭಗ್ನ ಮಾಡಿದ ದುಷ್ಕರ್ಮಿಗಳು; ಪೊಲೀಸ್ ಠಾಣೆ ಬಳಿ ಜಮಾಯಿಸಿದ ಯುವಕರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button