ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಧಿವೇಶನ ಮುಗಿಯುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಎಂಇಎಸ್ ನವರು ತಾವಿನ್ನು ಇದ್ದೇವೆ ಎಂಬುದನ್ನು ತೋರಿಸಿಕೊಳ್ಳಲು ಇಂತಹ ಕೃತ್ಯ ನಡೆಸುತ್ತಿದ್ದಾರೆ. ಎಂಇಎಸ್ ನಶಿಸಿ ಹೋಗುವ ಕಾಲ ಸನ್ನಿಹಿತವಾಗಿದೆ. ಈಗಾಗಲೇ ಎಂಇಎಸ್ ನ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಧಿವೇಶನ ಮುಗಿಯುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾತ್ರೋ ರಾತ್ರಿ ಕಲ್ಲು ತೂರಾಟ ನಡೆಸುವುದು, ಬೆಂಕಿ ಹಚ್ಚಿ ದಾಂಧಲೆ ನಡೆಸುವುದು ಪುರುಷಾರ್ಥಾನಾ? ಇಂತಹ ಘಟನೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗಿದೆ. ಎಂಇಎಸ್ ವಿರುದ್ಧ ಕಠಿಣ ನಿಲುವು ಕೈಗೊಳ್ಳುತ್ತೇವೆ ಎಂದು ಹೇಳಿದರು.
ಇನ್ನು ಮಹಾರಾಷ್ಟ್ರ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಡಿಜಿ, ಗೃಹ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳ ಮಟ್ಟದಲ್ಲಿ ಇಂದು ಸಭೆ ನಡೆಯಲಿದೆ. ಅಗತ್ಯ ಬಿದ್ದರೆ ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚೆ ನಡೆಸಲಾಗುವುದು ಎಂದರು.
ಬೆಳಗಾವಿಯಲ್ಲಿ ಬಂಧಿತರಿಗೆ 14 ದಿನ ನ್ಯಾಯಾಂಗ ಬಂಧನ: ಹಿಂಡಲಗಾ ಜೈಲಿಗೆ ಶಿಫ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ