Belagavi NewsBelgaum NewsKarnataka NewsLatest

*BREAKING: ಪತ್ನಿ ಆತ್ಮಹತ್ಯೆಗೆ ಶರಣು: ಸುದ್ದಿ ಕೇಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಸುದ್ದಿ ತಿಳಿದು ಕಂಗಾಲಾದ ಪತಿ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

Home add -Advt

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳದಲ್ಲಿ ಈ ಘಟನೆ ನಡೆದಿದೆ. ಉಮಾಶ್ರೀ ಹೆಗ್ಗಣ್ಣವರ್ ಆತ್ಮಹತ್ಯೆಗೆ ಶರಣಾದ ಮಹಿಳೆ. ಉಮಾಶ್ರೀ ಲಗಮಣ್ಣ ಎಂಬಾತನನ್ನು ಪ್ರೀತಿಸಿ ಎರಡುವರೆ ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು.

ನಿನ್ನೆ ಕೂಡ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಇದರಿಂದ ತೀವ್ರವಾಗಿ ಮನನೊಂದ ಉಮಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಷತ ತಿಳಿದು ಲಗಮಣ್ಣ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Related Articles

Back to top button