ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿಗೆ ತಡೆ ನೀಡಲಾಗಿದೆ. ಕನ್ನಡಿಗರ ಹೋರಾಟಕ್ಕೆ ಕೊನೆಗೂ ಮಹಾಸಚಿವರು ಬೆದರಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರಕ್ಕೆ ಇನ್ನಷ್ಟು ಸ್ಪಷ್ಟ ಸಂದೇಶ ರವಾನಿಸುವ ನಿಟ್ಟಿನಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ 1000 ಕನ್ನಡ ಬಾವುಟ ಹಾರಿಸಲು ನಿರ್ಧರಿಸಿದೆ.
ಧಾರವಾಡದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, 100 ವಾಹನಗಳಲ್ಲಿ ಇಂದು ಬೆಳಗಾವಿಗೆ ಹೋಗುತ್ತಿದ್ದೇವೆ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ 1000 ಕನ್ನಡ ಬಾವುಟ ಪ್ರದರ್ಶನ ಮಾಡಲಿದ್ದೇವೆ. ಅಧ್ಯಾರು ನಮ್ಮನ್ನು ತಡೆಯುತ್ತಾರೆ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಎಂಇಎಸ್ ಹಾಗೂ ಮಹಾರಾಷ್ಟ್ರ ಸಚಿವರು ಪದೇ ಪದೇ ಕನ್ನಡಿಗರನ್ನು, ಬೆಳಗಾವಿಯಲಿರುವ ಮರಾಠಿಗರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಕನ್ನಡಿಗರನ್ನು, ಕರ್ನಾಟಕವನ್ನು ಆಗಾಗ ಅವಮಾನಿಸುವ ಕೆಲಸವನ್ನು ಮಹಾರಾಷ್ಟ್ರ ಸಚಿವರು, ಅಲ್ಲಿನ ಸರ್ಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಅವರಿಗೆ ಉತ್ತರ ಕೊಡಬೇಕಿದೆ. ಮಹಾರಾಷ್ಟ್ರ ಸಚಿವರಿಗೆ ಖಡಕ್ ಆಗಿ ಉತ್ತರಿಸಲೆಂದೇ 100 ವಾಹನಗಳಲ್ಲಿ ಬೆಳಗಾವಿಗೆ ಹೊರಟಿದ್ದೇವೆ. 1000 ಕನ್ನಡ ಬಾವುಟ ಹಾರಿಸುತ್ತೇವೆ ಎಂದು ಹೇಳಿದ್ದಾರೆ.
ಕನ್ನಡಿಗರ ಹೋರಾಟಕ್ಕೆ ಬೆದರಿದ ಮಹಾ ಸಚಿವರು
https://pragati.taskdun.com/maharashtra-ministersbelagavivisit-canncelled/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ