
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ವಾಣಿಜ್ಯ ಪರೀಕ್ಷೆಯ ದಿನಾಂಕ 20 ರಿಂದ 27 ರವರೆಗೆ ಹಾಗೂ ಅರೇಬಿಕ್ ಪರೀಕ್ಷೆಯು ದಿನಾಂಕ 27 ರಿಂದ ಫೆ 1ರವರೆಗೆ ಜರುಗಲಿದ್ದು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ ರೋಷನ್ ನಿಷೇಧಾಜ್ಞೆ ಜಾರಿಗೋಳಿಸಿ ಆದೇಶ ಹೊರಡಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಈ ವೇಳೆ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರಿ ತಿರುಗಾಡಬಾರದು. ಪರೀಕ್ಷೆಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಹತ್ತಿರ ಬರಬಾರದು.
ಸಾರ್ವಜನಿಕ ಸಭೆ, ಮೆರವಣಿಗೆ ಮಾಡುವುದನ್ನು (ಶವ ಸಂಸ್ಕಾರ ಮತ್ತು ಮದುವೆ ಮೆರವಣಿಗೆಗಳನ್ನು ಹೊರತುಪಡಿಸಿ) ನಿಷೇಧಿಸಲಾದೆ. ಆಯುಧ, ಮಾರಕಾಸ್ತç, ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ತಿರುಗಾಡುವುದು, ಯಾವುದೇ ರೀತಿಯ ಫಟಾಕಿ/ಸಿಡಿಮದ್ದು ಸಿಡಿಸುವುದು ಹಾಗೂ ಸರ್ಕಾರಿ ಬಸ್ಸು ಹಾಗೂ ಇತರೆ ವಾಹನಗಳಿಗೆ ಅಡೆತಡೆ ಮಾಡಬಾರದು.
ಪರೀಕ್ಷಾ ಕೇಂದ್ರಗಳ 200ಮೀ. ಒಳಗಿನ ಝೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಬಂದ ಇಡತಕ್ಕದ್ದು. ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸರ್ಕಾರದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರಿಗೆ ಶಾಲಾ ಆವರಣದಲ್ಲಿ ಪ್ರವೇಶವನ್ನು ನಿರ್ಬಂಧಿಸಿದೆ.
ಒಂದು ವೇಳೆ ಸದರಿ ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ