Kannada NewsLatest

ಬೆಳಗಾವಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ ಜಾರಿಯಾಲ್ಲಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಮೂರ್ತಿಗೆ ಅವಮಾನಪಡಿಸಿದ ಘಟನೆಗೆ ಪ್ರತಿರೋಧವಾಗಿ ಕೆಲವು ಸಂಘಟಣಿಗಳು ಡಿಸೆಂಬರ್ 17ರ ರಾತ್ರಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಹಲವೆಡೆ ಕಡೆ ಕಲ್ಲು ತೂರಾಟ ಹಾಗೂ ಅನಗೋಳದಲ್ಲಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣಗಳು ನಡೆದಿದ್ದವು. ಎಂಇಎಸ್ ಪುಂಡಾಟ, ಕರವೇ ಪ್ರತಿಭಟನೆ ಬೆನ್ನಲ್ಲೇ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮತ್ತು ಅಹಿತಕರ ಘಟನೆಗಳು ಉಂಟಾಗುವ ಕಾರಣ ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಮುಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ ಹಾಗೂ ಬೆಳಗಾವಿ, ತಾಲೂಕಾ ವ್ಯಾಪ್ತಿಯಲ್ಲಿ ಕಲಂ 144 ಸಿಆರ್‌ಪಿಸಿ ರಂತೆ ಡಿಸೆಂಬರ್ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ನಿಷೇಧಾಜ್ಞೆ ಕ್ರಮವನ್ನು ಡಿಸೆಂಬರ್ 22ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button