ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಘನ ಉಚ್ಚ ನ್ಯಾಯಾಲಯವು ಹಿಜಾಬ್ ಕುರಿತಂತೆ ಅಂತಿಮ ತೀರ್ಪನ್ನು ಪ್ರಕಟಿಸಿದ ನಂತರ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದೇ ಇರುವುದರಿಂದ ಹಾಗೂ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿ ಇರುವುದರಿಂದ ಜಿಲ್ಲೆಯಾದ್ಯಂತ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಮಂಗಳವಾರ (ಮಾರ್ಚ್ 15)ದಿಂದ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ 1973 ಕಲಂ 144 ರಡಿ ನಿಷೇಧಾಜ್ಞೆ ಆದೇಶವನ್ನು ಹೊರಡಿಸಲಾಗಿತ್ತು, ಈ ಆದೇಶವನ್ನು ಮಾರ್ಚ್ 17 ರಂದು ಮಧ್ಯರಾತ್ರಿ 12 ಗಂಟೆಯಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.
ಈ ವಿಷಯವಾಗಿ ಮುಂದಿನ ಸೂಕ್ತ ಕ್ರಮವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಹೇಳಿದ್ದಾರೆ.
ಇಂದಿನಿಂದ 18 ರೈಲುಗಳ ಸಂಚಾರ ದಿಢೀರ್ ರದ್ದು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ