Kannada NewsKarnataka NewsLatest
*ಎಕ್ಸ್ ಪ್ರೆಸ್ ಹೈವೇಯಲ್ಲಿ ಮತ್ತೊಂದು ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅಪಘಾತದ ಸರಣಿ ಮುಂದುವರೆದಿದ್ದು, ಕೆ.ಎಸ್.ಆರ್.ಟಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಅಪಘಾತಕ್ಕೆ ಬಸ್ ಚಾಲಕ ಸಾವನ್ನಪ್ಪಿದ್ದಾರೆ.
ರಾಮನಗರ ತಾಲುಕಿನ ಜಯಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಡಿವೈಡರ್ ಹಾರಿ ಹೋಗಿದೆ.
ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.