Kannada NewsLatest
ಬೆಳಗಾವಿಯಲ್ಲಿ ಮೂವರು ಮಕ್ಕಳು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿಯಲ್ಲಿ ಮೂವರು ಮಕ್ಕಳು ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ 12ರಂದು ಕೆಲ ಮಕ್ಕಳಿಗೆ ಚುಚ್ಚುಮದ್ದು ಹಾಕಲಾಗಿತ್ತು. ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ನಿಂದ ಮಕ್ಕಳು ಮೃತಪಟ್ಟಿರಬಹುದು. ತನಿಖೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಪ್ರಕರಣದ ತನಿಖೆ ನಡೆಸಿ ಎರಡು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದೇನೆ. ಎ ಎನ್ ಎಂ, ಫಾರ್ಮಸಿಸ್ಟ್ ಸಸ್ಪೆಂಡ್ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು.
ಅರಣ್ಯ ಸಚಿವರನ್ನು ವಜಾಗೊಳಿಸಿ; ಪಕ್ಷದಿಂದಲೇ ಉಚ್ಛಾಟನೆ ಮಾಡಿದ ಸಿಎಂ ಪುಷ್ಕರ್ ಧಮಿ



