
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಶಾಂತಿ ಕದಡಲು ಯತ್ನಿಸಿದ್ದು, ನಾಲ್ಕು ಬೈಕ್ ಗಳಿಗೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ.
ಇಲ್ಲಿನ ನೆಹರು ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ನಾಲ್ಕು ಬೈಕ್ ಗಳಿಗೆ ಬೆಂಕಿ ಹಚ್ಚಿದ್ದು, ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಬೈಕ್ ಗಳು ಬೆಂಕಿಗಾಹುತಿಯಾಗಿವೆ.
ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರ ಪ್ರದೇಶದಲ್ಲಿ 1 ಲಕ್ಷ ಮನೆಗಳ ನಿರ್ಮಾಣಕ್ಕೆ ವಿಶೇಷ ಒತ್ತು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ