Kannada NewsLatest

ರಾಜ್ಯ ಮಟ್ಟದ ಸೈಕ್ಲೋಥಾನ್ ಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅರಣ್ಯ ಇಲಾಖೆಯ ವತಿಯಿಂದ 66ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ಖಾನಾಪುರ ತಾಲೂಕಿನ ಹೆಮ್ಮಡಗಾದಲ್ಲಿರುವ ಭೀಮಗಡ ಪ್ರಕೃತಿ ಶಿಬಿರದ ಹೆಬ್ಬಾಗಿಲಿನಲ್ಲಿ ಶಾಸಕಿ ಡಾ.ಅಂಜಲಿ ನಿಂಬಾಳಕರ್ ಚಾಲನೆ ನೀಡಿದರು.

ಭೀಮಗಡ ಅಭಯಾರಣ್ಯದಿಂದ ಆರಂಭವಾಗಿರುವ ಸೈಕ್ಲೋಥಾನ್ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಮೂಲಕ ಸಾಗಿ ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡು ಅಭಯಾರಣ್ಯದಲ್ಲಿ ಸಂಪನ್ನಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ವಿ ಪಾಟೀಲ, ಉಪ‌ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ ಅಮರನಾಥ ಸೇರಿದಂತೆ ಜಿಲ್ಲೆಯ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸೈಕ್ಲೋಥಾನ್ ದಲ್ಲಿ ರಾಜ್ಯದ ವಿವಿಧ ಭಾಗಗಳ 70ಕ್ಕೂ ಹೆಚ್ಚು ಸೈಕ್ಲಿಂಗ್ ಪಟುಗಳು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button