Belagavi NewsBelgaum News

*ಬೆಳಗಾವಿ: 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಜಲಪಾತಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಿದೆ. ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿಷೇಧಿಸಲಾಗಿದೆ.

ವೀಕೆಂಡ್ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಭಾಗದ ಜಲಪಾತಗಳ ವೀಕ್ಷೆಗೆ ಸಾವಿರಾರು ಸಂಖ್ಯೆಗಳಲ್ಲಿ ಆಗಮಿಸುತ್ತಾರೆ. ಬೆಳಗಾವಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಜಲಪಾತಗಳು ದುಮಿಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಫಾಲ್ಸ್ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

ಬಟಾವಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್ ಸೇರಿದಂತೆ 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದ್ದು, ಅರಣ್ಯ ಇಲಾಖೆಯಿಂದ ಗಸ್ತು ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button