Latest

ಒಂದೇ ಗ್ರಾಮದ 144 ಜನರಿಗೆ ಕೊರೊನಾ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಗ್ರಾಮವೊಂದರ ಅರ್ಧಕ್ಕರ್ಧ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿರುವ ಘಟನೆ ನಡೆದಿದೆ.

ಖಾನಾಪುರ ತಾಲೂಕಿನ ಪುಟ್ಟ ಗ್ರಾಮ ಅಬನಾಳಿಯಲ್ಲಿ 144 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಸ್ವಗ್ರಾಮಕ್ಕೆ ಬರುತ್ತಿರುವ ವಲಸೆ ಕಾರ್ಮಿಕರಿಂದಲೇ ಕೊರೊನಾ ಸೋಂಕು ಹರಡುತ್ತಿದೆ ಎನ್ನಲಾಗಿದೆ.

ಏಪ್ರಿಲ್ 6ರಂದು ಗ್ರಾಮದಲ್ಲಿ ಹೋಳಿ ಹುಣ್ಣಿಮೆ ನಿಮಿತ್ತ ಸಾತೇರಿ ದೇವಿ ಜಾತ್ರೆ ನಡೆದಿತ್ತು. ಜಾತ್ರೆ ಹಿನ್ನೆಲೆಯಲ್ಲಿ ಹಲವರು ಗ್ರಾಮಕ್ಕೆ ಆಗಮಿಸಿದ್ದರು. ಏಪ್ರಿಲ್ 9ರ ವೇಳೆಗೆ ಗ್ರಾಮದ ಹಲವರಲ್ಲಿ ಸೋಂಕಿನ ಲಕ್ಷ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ 249 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ಅವರಲ್ಲಿ 144 ಜನರಲ್ಲಿ ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಿ, ಇಡೀ ಗ್ರಾಮವನ್ನೇ ಸೀಲ್ ಡೌನ್ ಮಾಡಿದ್ದಾರೆ.
ಒಂದೇ ದಿನದಲ್ಲಿ ದಾಖಲೆಯ 2.95 ಲಕ್ಷ ಜನರಲ್ಲಿ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button