Latest

ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ABVP ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಯುಯುಸಿಎಂಎಸ್ ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಈ ಸಲ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ವೇತನ ಬಿಡುಗಡೆಯಾಗಿದೆ ಎಂದು ನಮೂದಿಸಲಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಕ್ಕಿಲ್ಲ. ಈ ಕೂಡಲೇ ಸರಕಾರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

Related Articles

ಎನ್‌ಇಪಿ ಜಾರಿಯಾದ ನಂತರ ಎಲ್ಲ ವಿಶ್ವವಿದ್ಯಾನಿಲಯಗಳು ಯುಯುಸಿಎಂಎಸ್ ತಂತ್ರಾಂಶವನ್ನು ಬಳಸಿ ದಾಖಲಾತಿಯಿಂದ ಫಲಿತಾಂಶದವರೆಗೆ ಎಲ್ಲ ರೀತಿಯ ಮಾಹಿತಿಯನ್ನು ಇದರ ಮೂಲಕವೇ ನಮೂದಿಸಬೇಕಾಗಿದೆ. ಆದರೆ ಈ ತಂತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದಾಗಿ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತೊಂದರೆಯಾಗುತ್ತಿದೆ. ವಿಶ್ವವಿದ್ಯಾಲಯಗಳು ಸರಿಯಾದ ರೀತಿಯಲ್ಲಿ ಫಲಿತಾಂಶವನ್ನು ನೀಡದೆ ಇರುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ವಿದ್ಯಾರ್ಥಿ ಸಮೂಹ ಎದುರಿಸುತ್ತಿದೆ. ಕೂಡಲೇ ಅವುಗಳನ್ನು ಸರಕಾರ ಬಗೆ ಹರಿಸಬೇಕೆಂದು ಆಗ್ರಹಿಸಿದರು.

ರೋಹಿತ್ ಉಮನಾಬಾದಿಮಠ, ಕಿರಣ ದುಕಾನದಾರ, ಶೈಲಜಾ ಹಲಕಿ, ದಿವ್ಯಾ, ಕಿರಣ ಜೋಶಿ, ಇರ್ಷಾದ್ ಮಲ್ಲಿಕಾನ, ಹೇಮಾ ತುಂಬರಗಿ, ಸಂದೀಪ ದಂಡಿಗಲ್, ರೋಹಿತ್ ಅಲಕುಂಟೆ, ಪ್ರೀತಮ್ ಉಪರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಅವಳಿ ಮಕ್ಕಳು ಬಲಿ

https://pragati.taskdun.com/latest/tumakuruwomantwins-babys-death/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button