ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದ ಲಾರಿಗೆ ಮೂರು ಕಾರುಗಳು ಡಿಕ್ಕಿಹೊಡೆದ ಘಟನೆ ವಂಟಮೂರಿ ಘಾಟ್ ಬಳಿ ನಡೆದಿದೆ.
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸಂಚಾರ ಸುಗಮಗೊಳಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.
ಅಪಘಾತದ ಸ್ಥಳಕ್ಕೆ ಬೆಳಗಾವಿ ಡಿಸಿಪಿ ಸ್ನೇಹಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಅಪಘಾತದಲ್ಲಿ ಸಾವು
https://pragati.taskdun.com/indian-student-died-in-canada-by-road-accident/
ಪಶ್ಚಿಮ ಬಂಗಾಳದ ಸಂಸದೆ ಹಾಟ್ ಅವತಾರಕ್ಕೆ ಅವಕ್ಕಾದ ಜನ !
https://pragati.taskdun.com/west-bengal-tmc-mp-nusrath-jahan-hot-look-photo-viral-in-social-media/




