
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ತುಂಬಿಕೊಂಡು ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಬಸವರಾಜ ಬಸವಂತಪ್ಪಾ ಕೊಳವಿ ಎಂಬ ಯುವಕ ಸಾವನ್ನಪ್ಪಿದ್ದಾನೆ. ತುಮರಗುದ್ದಿಯಿಂದ ಅಂಕಲಗಿ ಮಾರ್ಗವಾಗಿ ಗೋಕಾಕ, ಬೆಳಗಾವಿ, ಸುಲದಾಳ ಬಾಯ್ ಪಾಸ್ ರಸ್ತೆ ಮೇಲೆ ಸಂಚರಿಸುತ್ತಿದ್ದಾಗ ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ ಮತ್ತು ಟ್ರೇಲರಗೆ ಬೈಕ್ ಗುದ್ದಿದ್ದಾನೆ. ಅಪಘಾತದ ರಭಸಕ್ಕೆ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಅಂಕಲಗಿ ಪೊಲೀಸ ಠಾಣೆ ಅಪರಾಧ ಸಂಖ್ಯೆ: 08/2026. ಕಲಂಃ 281, 106(1), 285 ಬಿ.ಎನ್.ಎಸ್-2023. ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಕೊಳ್ಳಲಾಗಿದೆ.



