Belagavi NewsBelgaum News

*ಬೆಳಗಾವಿಯಲ್ಲಿ ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

ಪತಿ, ಪತ್ನಿ ಹಾಗೂ ಮಗಳು ಬೈಕ್ ನಲ್ಲಿ ಸಂಬಂಧಿಕರ ಮದುವೆ ತೆರಳುತ್ತಿದ್ದರು. ಈ ವೇಳೆ ಅಥಣಿ ಬಳಿ ಹಿಂದಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ರಾಮು ಕರ್ಣಿ (49) ಹಾಗೂ ಮಗಳು ಜಾಹ್ನವಿ (11) ಮೃತರು. ರಾಮು ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮಹಾರಾಷ್ಟ್ರದ ಜತ್ತ ತಾಲೂಕಿನ ಮಂಡಿಗೇರಿ ನಿವಾಸಿಗಳು.

ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Related Articles

Back to top button