*ಕಾನೂನು ಸಚಿವರ ವಿರುದ್ಧ ಧಿಕ್ಕಾರ ಕೂಗಿದ ವಕೀಲರು; ಪ್ರತಿಭಟನಾಕಾರರಿಂದ ಸುವರ್ಣ ವಿಧಾನಸೌದಕ್ಕೆ ಮುತ್ತಿಗೆ ಯತ್ನ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ವಕೀಲರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಕೀಲರ ಸಂರಕ್ಷಣಾ ವಿಧೇಯಕ ಅಂಗೀಕಾರಕ್ಕೆ ಆಗ್ರಹಿಸಿ ವಕೀಲರ ಸಂಘ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದೆ. ಕಾನೂನು ಸಚಿವ ಮಾಧುಸ್ವಾಮಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸುವಂತೆ ಒತ್ತಾಯಿಸಿದ್ದಾರೆ. ಸಚಿವರು ಸ್ಥಳಕ್ಕೆ ಆಗಮಿಸದಿದ್ದಾಗ ರೊಚ್ಚಿಗೆದ್ದ ವಕೀಲರು, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಈ ವೇಳೆ ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ. ಬ್ಯಾರಿಕೇಡ್ ಗಳನ್ನು ಕಿತ್ತೆಸೆದು ಪಕ್ಕದ ಜಮೀನಿನ ಮೂಲಕ ಸಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬೆಳಗಾವಿ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಹಾಗೂ ವಕೀಲರ ಸಂಘದ ಮುಖಂಡರ ನಡುವೆ ವಾಗ್ವಾದ ನಡೆದಿದೆ.
ಮತ್ತೊಂದೆಡೆ ಬ್ಯಾರಿಕೇಡ್ ಗಳನ್ನು ಕೆಡವಿ ನುಗ್ಗಿದ ಪ್ರತಿಭಟನಾ ನಿರತ ವಕೀಲರನ್ನು ಪೊಲೀಸರು ಹಗ್ಗಗಳನ್ನು ಹಾಕಿ ತಡೆಯಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ನಿರತರ ಮನವೊಲಿಕೆಗೆ ಕಮಿಷನರ್ ಬೋರಲಿಂಗಯ್ಯ ಯತ್ನಿಸಿದ್ದಾರೆ. ಆದರೂ ಜಗ್ಗದ ವಕೀಲರು ಸುವರ್ಣ ವಿಧಾನಸೌಧದ ಗೇಟ್ ಮೇಲೆ ಹತ್ತಿ ಸಚಿವ ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಆಗಮಿಸಿದ ಕಂದಾಯ ಸಚಿವ ಆರ್.ಅಶೋಕ್. ಪೊಲೀಸರ ಮೇಲೆ, ವಕೀಲರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಕೀಲರ ಹಿತರಕ್ಷಣ ಕಾಯ್ದೆ ಜಾರಿಗೆ ಒತ್ತಾಯಿಸಿದ್ದಾರೆ. ಕಾಯ್ದೆ ಜಾರಿಗೊಳಿಸಲು ಸಿಎಂ ಹಾಗೂ ಸಚಿವರು ಒಪ್ಪಿದ್ದಾರೆ. ಹಾಗಾಗಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ಸಚಿವರ ಮನವೊಲಿಕೆಗೆ ಒಪ್ಪಿದ ವಕೀಲರು ಪ್ರತಿಭಟನೆ ಹಿಂಪಡೆದಿದ್ದಾರೆ.
*BREAKING: ಪ್ರಧಾನಿ ಮೋದಿ ಸಹೋದರನ ಕಾರು ಭೀಕರ ಅಪಘಾತ; ಮಗ, ಸೊಸೆ ಗಂಭೀರ*
https://pragati.taskdun.com/pm-narendra-modibrotherprahlad-modicaraccidentmysore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ