ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಏಮ್ಸ್ ನೀಡುವಂತೆ ಒತ್ತಾಯಿಸಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಂಗಳೂರು ಹೊರತು ಪಡೆಸಿದರೆ ಬೆಳಗಾವಿ ಜಿಲ್ಲೆ ಹೆಚ್ಚು ಜನಸಂಖ್ಯೆ ಹೊಂದಿದೆ. ಬೆಳಗಾವಿಯಲ್ಲಿ ಎಲ್ಲ ಸೌಕರ್ಯ ಇದ್ದರೂ ಕಡಿಮೆ ಜನಸಂಖ್ಯೆ ಇರುವ ನೆರೆಯ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಸೌಲಭ್ಯ ನೀಡುತ್ತಿರುವುದು ಸರಿಯಲ್ಲ ಎಂದು ಮನವಿಯಲ್ಲಿ ದೂರಿದ್ದಾರೆ.
ಈಗಾಗಲೇ ನೆರೆಯ ಜಿಲ್ಲೆಗೆ ಸುಸಜ್ಜಿತವಾದ ಹಾಸಿಗೆಯಳ್ಳ ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಸರ್ಕಾರ ನೀಡಿದೆ. ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ ಎಂದು ಹೆಗ್ಗಳಿಕೆ ಪಾತ್ರವಾಗಿದ್ದರೂ, ಸರ್ಕಾರ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಬೆಳಗಾವಿಯಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳಗಾವಿಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಯೋಜನೆ ಜಾರಿಗೆ ತಂದರೂ ಇಲ್ಲಿಯವರೆಗೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ. ಕಡಿಮೆ ಜನಸಂಖ್ಯೆ ಇರುವ ನೆರೆಯ ಜಿಲ್ಲೆಗೆ ಸರ್ಕಾರ ವೈದ್ಯಕೀಯ ಸೌಲಭ್ಯ ನೀಡಿ, ಹೆಚ್ಚು ಜನಸಂಖ್ಯೆ ಇರುವ ಬೆಳಗಾವಿ ಜಿಲ್ಲೆಯನ್ನು ಕಡೆಗಣನೆ ಮಾಡುವುದು ಸೂಕ್ತವಲ್ಲ. ಕೂಡಲೇ ಸರ್ಕಾರ ಬೆಳಗಾವಿ ಜಿಲ್ಲೆಯ ಜನರ ಹಿತದೃಷ್ಟಿಯಿಂದ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಆಮ್ ಆದ್ಮಿ ಜಿಲ್ಲಾಧ್ಯಕ್ಷ ವಿಜಯ ಪಾಟೀಲ, ಶಂಕರ ಹೆಗಡೆ, ಅನಿಸ್ ಸೌದಾಗರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
PSI ಅಕ್ರಮ; ಮತ್ತೋರ್ವ ಕಾನ್ಸ್ ಟೇಬಲ್ ಬಂಧನ
ಹೆಲಿಕಾಪ್ಟರ್ ಪತನ ಪ್ರಕರಣ; 7 ಮೃತದೇಹಗಳು ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ