ಬೆಳಗಾವಿಯಲ್ಲಿ ನೇರಾ ನೇರ ಚುನಾವಣಾ ರಣಕಹಳೆ ಮೊಳಗಿಸಿದ BJP ಚಾಣಾಕ್ಯ; ಭಾಷಣಕ್ಕೆ ಲೋಕಲ್ ಟಚ್ ನೀಡಿದ ಅಮಿತ್ ಶಾ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರಿಗೆ ನಾನು ಪ್ರೆಶ್ನೆ ಮಾಡುತ್ತಿದ್ದೇನೆ, ಕರ್ನಾಟಕದ ಜನತೆಗೆ ನೀವು ನೀಡಿದ ಕೊಡುಗೆಯೇನು? ಎರಡೂ ಪಕ್ಷಗಳು ಕುಟುಂಬ ರಾಜಕೀಯಕ್ಕೆ ಹೆಸರುವಾಸಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದೆಹಲಿ ಹೈಕಮಾಂಡ್ ಗೆ ಕೆಪಿಸಿಸಿ ಎಟಿಎಂ ಆಗಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಿಂದ ಮಾತ್ರ ಕಾರ್ನಾಟಕದ ಅಭಿವೃದ್ಧಿ ಸಾಧ್ಯ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಎಲ್ಲಾ ಸಮುದಾಯಗಳ ಅಭಿವೃದ್ಧಿಯಾಗಿದೆ. ಬಡವರು, ದೀನದಲಿತರು, ಮಹಿಳೆಯರು, ರೈತರು, ಯುವಕರು ಸೇರಿದಂತೆ ಎಲ್ಲರ ಅಭಿವೃದ್ಧಿ ಮಾಡಲಾಗುತ್ತಿದೆ. 3ಕೋಟಿ ಮನೆ, 10 ಕೋಟಿ ಜನರಿಗೆ ಶೌಚಾಲಯ ನಿರ್ಮಾಣ, ಕೋವಿಡ್ ವೇಳೆ ಬಡವರಿಗೆ ಉಚಿತವಾಗಿ 5 ಕೆಜಿ ಅಕ್ಕಿ ವಿತರಣೆ ಮಾಡಲಾಗಿದೆ. 7 ಕೋಟಿ ಜನರು ಅಯುಷ್ಮಾನ್ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಹೇಳಿದರು.
ನೇರವಾಗಿ ಚುನಾವಣೆ ಪ್ರಚಾರ ಭಾಷಣದಂತೆ ಮಾತು ಆರಂಭಿಸಿದ ಅಮಿತ್ ಶಾ, ಕಮಲ ಚಿನ್ಹೆ ಒತ್ತುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ ಎಂದು ಕೋರಿದರು.
ತಮ್ಮ ಭಾಷಣಕ್ಕೆ ಲೋಕಲ್ ಟಚ್ ನೀಡಿದ ಅವರು, ಮಹದಾಯಿ ಯೋೋಜನೆಗೆ ಕಾಂಗ್ರೆಸ್ ಅಡ್ಡಗಾಲಾಗಿತ್ತು. ಆದರೆ ಬಿಜೆಪಿ ಯೋಜನೆಗೆ ಮಂಜೂರು ನೀಡುವಲ್ಲಿ ಯಶಸ್ವಿಯಾಾಗಿದೆ ಎಂದರು. ಬೈಲಹೊಂಗಲದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಆರಂಭಿಸಲಾಗಿದೆ ಎಂದೂ ವಿವರಿಸಿದರು. ಜಲಜೀವನ್ ಮಿಶನ್ ಯೋಜನೆ ಸೇರಿದಂತೆ ಬಿಜೆಪಿಯ ಯೋಜನೆಗಳನ್ನು ಪ್ರಸ್ತಾಪಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ತಮ್ಮ ಸರಕಾರದ ಯೋಜನೆಗಳನ್ನು ಪ್ರಸ್ತಾಪಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಸದರಾದ ಅಣ್ಣಾ ಸಾಹೇಬ ಜೊಲ್ಲೆ, ಮಂಗಳಾ ಅಂಗಡಿ, ಈರಣ್ಣಾ ಕಡಾಡಿ, ಶಾಸಕರಾದ ಮಹಾಂತೇಶ ದೊಡಗೌಡರ, ಅಭಯ್ ಪಾಟೀಲ್, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಮತ್ತಿತರರು ಹಾಜರಿದ್ದರು.
*ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ*
https://pragati.taskdun.com/amith-shahbelagavivisitjana-sankalpa-yatre/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ