
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಾರೂಗೇರಿ ಪುರಸಭೆಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ(ಹಂತ-೪) ರಡಿ(ಅ) ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಮನೆಗಳಿಗೆ ಸೋಲಾರ ದೀಪ ಹಾಗೂ (ಬ) ಸಾಮಾನ್ಯ ಬಡ ಕುಟುಂಬಗಳಿಗೆ ಸೋಲಾರ ದೀಪ ಪೂರೈಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅದೇ ರೀತಿಯಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನ ಹಾಗೂ (ಡ) ವಿವಿಧ ವಸತಿಯೋಜನೆಯಡಿ ಆಯ್ಕೆಯಾಗುವ ವಸತಿಯೋಜನೆಯ ಫಲಾನುಭವಿಗಳಿಗೆ ವಂತಿಗೆ ಪಾವತಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಡಿಸೆಂಬರ್ ೧೫ ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ ೦೮೩೩೧-೨೫೭೦೪೧ ಅಥವಾ ಪುರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಹಾರೂಗೇರಿ ಪುರಸಭೆ ಮುಖ್ಯಾಧಿಕಾರಿ ಜಿ. ವ್ಹಿ. ಹಣ್ಣಿಕೇರಿ ಅವರು ತಿಳಿಸಿದ್ದಾರೆ.
2022-23ನೇ ಸಾಲಿನ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
https://pragati.taskdun.com/yuva-mandala-awardapplicationbelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ