Belagavi NewsBelgaum NewsKannada NewsKarnataka NewsLatest

*ಎಪಿಎಂಸಿ ಮಾರುಕಟ್ಟೆಯಲ್ಲಿ ಆತ್ಮಹತ್ಯೆಗೆ ಶರಣಾದ ಅಪರಿಚಿತ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಈ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಇದೇ ಮಾರುಕಟ್ಟೆ ಪ್ರದೇಶದಲ್ಲಿ ಖಾಲಿ ಬಾಟಲಿಗಳನ್ನು ಆಯ್ದುಕೊಂಡು ಜೀವಿಸುತ್ತಿದ್ದರು. ರಾತ್ರಿ ವೇಳೆ ಇಲ್ಲೇ ವಾಸ್ತವ್ಯ ಹೂಡುತ್ತಿದ್ದರು ಎನ್ನಲಾಗಿದೆ.

Home add -Advt

ಭಾನುವಾರ ಬೆಳಿಗ್ಗೆ ಮಾರುಕಟ್ಟೆಯ ಮುಚ್ಚಿದ ಅಂಗಡಿಯೊಂದರ ಮುಂಭಾಗದಲ್ಲಿ ಇವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಎಪಿಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಅಸುನೀಗಿದ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.

Related Articles

Back to top button