Belagavi NewsBelgaum NewsKannada NewsKarnataka NewsLatest

*ಅರಭಾವಿ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಲಿಂಗೈಕ್ಯ*

ಪ್ರಗತಿವಾಹಿನಿ ಸುದ್ದಿ; ಗೋಕಾಕ್: ಗೋಕಾಕ್ ತಾಲೂಕಿನ ಅರಭಾವಿ ಮಠದ ಶ್ರೀಮದ್ಧ ಜಗದ್ಗುರು ಶ್ರೀ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ 11ನೇ ಪೀಠಾಧಿಪತಿ ಶ್ರೀ ಮ.ನಿ.ಪ್ರ.ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು,

ಎಂದಿನಂತೆ ಲಿಂಗಪೂಜೆಗೆ ಸ್ನಾನಕ್ಕೆಂದು ಹೋದಾಗ ಶ್ರೀಗಳು ಭಾನುವಾರ ಸಂಜೆ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಶ್ರೀಗಳ ಸೇವಕರು ತಕ್ಷಣ ಅವರನ್ನು ಗೋಕಾಕ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸದೇ ಶ್ರೀಗಳು ಭಾನುವಾರ ರಾತ್ರಿ 9 ಗಂಟೆಗೆ ಇಹಲೋಕತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button